Monday, December 23, 2024

ಬೆಂ.ಗ್ರಾ ಜಿಲ್ಲಾಡಳಿತ ಭವನದಲ್ಲಿ‌ 68ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ: “68 ನೇ ಕನ್ನಡ ರಾಜ್ಯೋತ್ಸವ”ದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಮುಂಭಾಗದ ಆವರಣದಲ್ಲಿಂದು ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಶಿವಶಂಕರ.ಎನ್ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ, ತ್ರಿವರ್ಣ ಧ್ವಜಕ್ಕೆ ಗೌರವ ವಂದನೆ ಸಲ್ಲಿಸಿದರು.

ಇದನ್ನೂ ಓದಿ: ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಸಾಧ್ಯತೆ!

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ‌.ಕೆ.ಎನ್.ಅನುರಾಧ, ಅಪರ ಜಿಲ್ಲಾಧಿಕಾರಿ ಅಮರೇಶ್.ಹೆಚ್, ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES