ಬೆಂಗಳೂರು : ನನ್ನ ಆರೋಗ್ಯ ಸುಧಾರಣೆ ಆದ್ರೆ ಖಂಡಿತವಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಗೆ ಹೋಗುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.
ಬರ ಪರಿಹಾರಕ್ಕಾಗಿ ಸರ್ಕಾರದಿಂದ ಕೇಂದ್ರಕ್ಕೆ ಪತ್ರ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿಮಗೆ ಅರ್ಥ ಆಗುತ್ತೆ ನನ್ನ ಆರೋಗ್ಯ ಸ್ಥಿತಿ ಹೇಗಿದೆ ಅಂತಾ ಎಂದು ತಿಳಿಸಿದ್ದಾರೆ.
ಮಧ್ಯ ಕರ್ನಾಟಕದಲ್ಲಿ ರೈತರಿಗೆ ಮಳೆ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಕಿದ ಬೆಳೆ ಒಣಗಿದ್ದು, ರೈತರು ಕಿತ್ತು ಹಾಕುತ್ತಿದ್ದಾರೆ. ಇದರಿಂದ ಬೆಳೆ ನಾಶ ಆಗುತ್ತಿದೆ. ನೆಲಗಡಲೆ, ಕಬ್ಬು ಸೇರಿದಂತೆ ವಿವಿಧ ಬೆಳೆಗೆ ಬೆಂಕಿ ಹಾಕಿ ರೈತರು ಸುಡುತ್ತಿದ್ದಾರೆ. ಸರ್ಕಾರಕ್ಕೆ ಅದೆಲ್ಲವನ್ನು ಎದುರಿಸುವ ಶಕ್ತಿ ಇದೆ. ಈ ಕುರಿತು ಸರ್ಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ ಎಂದು ತಿಳಿಸಿದ್ದಾರೆ.
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ
ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ. ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು. ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಎಂದು ಹೆಚ್.ಡಿ ದೇವೇಗೌಡ ಅವರು ಪೋಸ್ಟ್ ಮಾಡಿದ್ದಾರೆ.
ನಾಡಿನ ಸಮಸ್ತ ಜನತೆಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.
ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ ಇಂದಿಗೆ 50 ವರ್ಷ ಪೂರೈಸಿದ್ದು, ಕನ್ನಡದ ಅಸ್ಮಿತೆಯ ಉಳಿವಿಗಾಗಿ ಹಾಗೂ ಕನ್ನಡಿಗರ ಏಳಿಗೆಗಾಗಿ, ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ.
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ. pic.twitter.com/yntkGQYzfe
— H D Deve Gowda (@H_D_Devegowda) November 1, 2023