Friday, November 22, 2024

ದೆಹಲಿಗೆ ಮತ್ತೆ ವಾಯುಮಾಲಿನ್ಯ ಕಂಟಕ!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಗುಣಮಟ್ಟವು ತೀವ್ರ ಕಳಪೆ ಇರುವ ಪ್ರದೇಶಗಳಲ್ಲಿ ನಿರ್ಮಾಣ ಕಾಮಗಾರಿ ನಿಷೇಧಿಸಲಾಗುವುದು ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರಾಯ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತತ ಐದು ದಿನಗಳವರೆಗೆ ವಾಯುಗುಣಮಟ್ಟ ಸೂಚ್ಯಂಕ 400 ಗಿಂತಲೂ ಹೆಚ್ಚಿರುವ ಪ್ರದೇಶಗಳಲ್ಲಿ ನಿರ್ಮಾಣ ಕಾಮಗಾರಿಗಳನ್ನು ಸರ್ಕಾರ ನಿಷೇಧಿಸಲಿದೆ ಎಂದು ಹೇಳಿದ್ದಾರೆ. ಮುಂದಿನ ಕೆಲ ದಿನಗಳ ಕಾಲ ಪರಿಸ್ಥಿತಿ ಇದೇ ರೀತಿ ಮುಂದುವರಿಯುವ ಸಾಧ್ಯತೆ ಇದೆ. ಹಾಗಾಗಿ ಮುಂದಿನ ಎರಡು ವಾರಗಳ ಕಾಲ ನಿರ್ಣಾಯಕವೆನಿಸಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಯುವಕ ಕಿಡ್ನ್ಯಾಪ್​, ಹಾಸನದಲ್ಲಿ ಬಿಟ್ಟು ಎಸ್ಕೇಪ್​!

ವಾಯುಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸುವಂತೆ ನೋಡಲ್ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ವಾಯುಮಾಲಿನ್ಯ ನಿಯಂತ್ರಣ ಯೋಜನೆಯ ಅಡಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಹೊರತಾಗಿಯೂ ನಗರದಲ್ಲಿ ವಾಯುಮಾಲಿನ್ಯ ಕಳಪೆ ಮಟ್ಟದಲ್ಲಿದೆ.

RELATED ARTICLES

Related Articles

TRENDING ARTICLES