Monday, December 23, 2024

ದೀಪಾವಳಿ ಹಬ್ಬಕ್ಕೆ BBMPಯಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಅತ್ತಿಬೆಲೆ ಪಟಾಕಿ ದುರಂತ ಬಳಿಕ ಬೆಂಗಳೂರು ಮಹಾನಗರ ಪಾಲಿಕೆ (BBMP) ಎಚ್ಚೆತ್ತುಕೊಂಡಿದ್ದು, ದೀಪಾವಳಿ (Deepavali) ಹಬ್ಬಕ್ಕೆ ಮಾರ್ಗಸೂಚಿ (Guidelines) ಬಿಡುಗಡೆ ಮಾಡಿದೆ.

ಇತ್ತೀಚೆಗಷ್ಟೇ ಪಟಾಕಿ ಗೋದಾಮಿನಲ್ಲಿ (ಗೋಡೌನ್‌) ಅಗ್ನಿ ಅವಘಡ ಸಂಭವಿಸಿ 14ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು. ಈ ಹಿನ್ನಲೆ ಇದೀಗ ಧಾರ್ಮಿಕ ಮೈದಾನಗಳು, ಶಾಲಾ ಕಾಲೇಜಿನ ಮೈದಾನಗಳು, ಕೇಂದ್ರ-ರಾಜ್ಯ ಸರ್ಕಾರದ ನಿಯಂತ್ರಣಕ್ಕೆ ಒಳಪಡುವ ಕಾರ್ಖಾನೆ, ರಕ್ಷಣಾ ಇಲಾಖೆ ಮೈದಾನಗಳು ಸೇರಿದಂತೆ ಖಾಸಗಿ ಮೈದಾನಗಳಲ್ಲೂ ಪಟಾಕಿ ಮಾರಾಟವನ್ನು ನಿರ್ಬಂಧಿಸಲಾಗಿದೆ.

ಬಿಬಿಎಂಪಿ ಗುರುತು ಮಾಡಿದ ಸ್ಥಳಗಳಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಒಂದು ವಲಯದಲ್ಲಿ 2 ಅಥವಾ 3 ಮೈದಾನದಲ್ಲಿ ಮಾತ್ರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಒಂದು ಮೈದಾನದಲ್ಲಿ 10 ಮಳಿಗೆಗಳನ್ನು ತೆರೆಯಬೇಕು. ಜೊತೆಗೆ ಪ್ರತಿ ಮಳಿಗೆಯ ನಡುವೆ ಮೂರರಿಂದ 4 ಅಡಿ ಅಂತರವಿದ್ದು, ಬೆಂಕಿ ನಂದಿಸುವ ಉಪಕರಣ ಕೂಡ ಕಡ್ಡಾಯವಾಗಿ ಇರಬೇಕು. ಪಟಾಕಿ ಮಾರುವವರು ಮಳಿಗೆಯ ಪರವಾನಗಿ ಪ್ರದರ್ಶಿಸಬೇಕು. ಯಾರಾದರೂ ಅವಧಿ ಮುಗಿದ ಪಟಾಕಿ ಮಾರಾಟ ಮಾಡಿದರೆ ದಂಡ ವಿಧಿಸುವಂತೆ ಸೂಚಿಸಿದೆ.

ಸರ್ಕಾರದಿಂದಲೂ ಸುತ್ತೋಲೆ ಬಿಡಿಗಡೆ

ಪಟಾಕಿ ಮಾರಾಟ ಮತ್ತು ಬಳಕೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ‌ ಬಿಡುಗಡೆ ಮಾಡಲಾಗಿದೆ. ಕಳೆದ ತಿಂಗಳು ಪಟಾಕಿ ದುರಂತ ನಡೆದಿದ್ದು, ಈ ಹಿನ್ನೆಲೆಯಲ್ಲಿ ದೀಪಾವಳಿಗೆ ಕೆಲ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಹಸಿರು ಪಟಾಕಿ ಮಾರಾಟ ಮಾಡಲು ಹಾಗೂ ಸಿಡಿಸಲು ಮಾತ್ರ ರಾಜ್ಯ ಸರ್ಕಾರ ಅನುಮತಿ ನೀಡಿದೆ.

RELATED ARTICLES

Related Articles

TRENDING ARTICLES