ಕೊಪ್ಪಳ : ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ರಾಜ್ಯ ಭೇಟಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಕೊಪ್ಪಳದ ಬಸಾಪೂರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಇಬ್ಬರೂ ಬಂದಿದ್ದು ಲೋಕಸಭಾ ಚುನಾವಣೆಯ ಚರ್ಚೆ ಸಲುವಾಗಿ ಎಂದು ಜಾಣ್ಮೆಯ ಉತ್ತರ ಕೊಟ್ಟಿದ್ದಾರೆ.
ಮುಂಬರುವ ದಿನಗಳಲ್ಲಿ ಶಾಸಕರನ್ನು ನಿಗಮ ಮಂಡಳಿಗೆ ನೇಮಕ ಮಾಡಲು ಚರ್ಚಗೆ ಬಂದಿದ್ದರು. ಜಿಲ್ಲೆಯ ಬರ ನಿರ್ವಹಣೆಯಲ್ಲಿ ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಯಲ್ಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಯವರು ಮೊದಲು ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆ ಮಾಡಿಸಲಿ. ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತಾಳುತ್ತಿದೆ. ನಮ್ಮ ಸಚಿವರು ಹೋದರು ಅವರ ಭೇಟಿಗೆ ಅವಕಾಶ ಕೊಡುತ್ತಿಲ್ಲ. 600 ಕೋಟಿ ನರೇಗಾ ಯೋಜನೆಯ ಹಣ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ನಾಯಕರಿಗೆ ಚಾಟಿ ಬೀಸಿದ್ದಾರೆ.
ದುಬೈ ಪ್ರವಾಸದ ಬಗ್ಗೆ ಸಿಎಂ ಹೇಳಿದ್ದೇನು?
ಇದೇ ವೇಳೆ ಕಾಂಗ್ರೆಸ್ ಶಾಸಕರ ದುಬೈ ಪ್ರವಾಸ ವಿಚಾರ ಸಂಬಂಧ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಶಾಸಕರು ತಮ್ಮ ಹಣದಲ್ಲಿ ಪ್ರವಾಸ ಮಾಡಿದರೆ ಏನು ಕಷ್ಟ? ಸರ್ಕಾರದಿಂದ ನಾವು ಅವರನ್ನು ದುಬೈಗೆ ಕಳುಹಿಸುತ್ತಿಲ್ಲ. ಅವರು ಪ್ರವಾಸ ಹೋಗುತ್ತಿರುವ ವಿಚಾರ ನನಗೆ ಗೊತ್ತೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.