Monday, December 23, 2024

ಬಿಜೆಪಿಯವರು ನಮ್ಮ ಶಾಸಕರಿಗೆ ಚಾಕೊಲೇಟ್ ಕೊಡಲು ಬರ್ತಾರೆ : ಡಿ.ಕೆ ಶಿವಕುಮಾರ್

ಬೆಂಗಳೂರು : ನಾಯಿ-ನರಿಗಳಂತೆ ಕಾಂಗ್ರೆಸ್​​ನವರು ಕಚ್ಚಾಡುತ್ತಾರೆ ಎಂಬ ಮಾಜಿ ಸಿಎಂ ಡಾ.ಬಿ.ಎಸ್ ಯಡಿಯೂರಪ್ಪ ಹೇಳಿಕೆಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕಿತ್ತಾಡುತ್ತಿದ್ದಾರೆ. ಬಿಜೆಪಿಯವರ ಕಿತ್ತಾಟದಿಂದ ವಿರೋಧ ಪಕ್ಷದ ನಾಯಕನ ನೇಮಕ ಮಾಡಲೂ ಆಗುತ್ತಿಲ್ಲ. ಅವರದನ್ನು ಮುಚ್ಚಿಕೊಳ್ಳಲು ನಮ್ಮ ಬಗ್ಗೆ ಮಾತಾಡುತ್ತಾರೆ. ನಮ್ಮ ಶಾಸಕರಿಗೆ ಚಾಕೊಲೇಟ್ ಕೊಡಲು ಬರ್ತಾರೆ ಎಂದು ಚಾಟಿ ಬೀಸಿದ್ದಾರೆ.

ಡಿಕೆಶಿ ನೇತೃತ್ವದಲ್ಲಿ ಒಕ್ಕಲಿಗರ ಸಭೆ

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಸದ್ದು ಮಾಡುತ್ತಿದೆ. ಈ ನಡುವೆಯೇ ಬೆಂಗಳೂರಿನ ಕಿಮ್ಸ್​ ಆಸ್ಪತ್ರೆಯ ಒಕ್ಕಲಿಗರ ಭವನದಲ್ಲಿ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ನಾಯಕರ ಸಭೆ ನಡೆದಿದೆ. ಯಾವ ಉದ್ದೇಶದಿಂದ ಈ ಸಭೆ ಎಂಬ ವಿಚಾರ ಇನ್ನೂ ಗುಟ್ಟಾಗಿದೆ. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಒಕ್ಕಲಿಗ ಸಮುದಾಯದ ಶಾಸಕರು, ನಾಯಕರು ಹಾಗೂ ಒಕ್ಕಲಿಗ ಸಮುದಾಯದ ವಿವಿಧ ಮಠದ ಶ್ರೀಗಳು ಭಾಗವಹಿಸಿದ್ದಾರೆ.

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ

ಇನ್ನೂ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, 5 ವರ್ಷ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಹೇಳುವ ಮೂಲಕ ಅಧಿಕಾರ ಡಿಕೆಶಿ ಬಣಕ್ಕೆ ಬಿಗ್ ಶಾಕ್ ಕೊಟ್ಟಿದ್ದಾರೆ. ರಾಜ್ಯದ ಜನ ನಮ್ಮನ್ನು ಬೆಂಬಲಿಸಿ 136 ಸ್ಥಾನ ಕೊಟ್ಟಿದ್ದಾರೆ. ಮತ್ತೆ ಚುನಾವಣೆಗೆ ಹೋಗ್ತೀವಿ, ಗೆಲ್ತೀವಿ. ಸರ್ಕಾರಕ್ಕೆ 5 ವರ್ಷ ಜನ ಆಶೀರ್ವದಿಸಿದ್ದಾರೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES