ಬೆಂಗಳೂರು: ರೇಷನ್ ಕಾರ್ಡ್ ತಿದ್ದುಪಡಿಗೆ ಬುಧವಾರದಿಂದ ಮತ್ತೊಮ್ಮೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅವಕಾಶ ಕಲ್ಪಿಸಿದ್ದು ಬೆಳಗ್ಗೆ 10 ರಿಂದ ಸಂಜೆ 7ರ ವರೆಗೆ ಮಾತ್ರ ತಿದ್ದುಪಡಿ ಮಾಡಿಸಬಹುದಾಗಿದೆ.
ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳಾಗಲು ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿ ಅತ್ಯವಶ್ಯಕವಾಗಿದ್ದು, ತಿದ್ದುಪಡಿಗೆ ಅವಕಾಶ ಕಲ್ಪಿಸುವಂತೆ ಬೇಡಿಕೆ ಹೆಚ್ಚಾದ ಹಿನ್ನೆಲೆ ಹಂತ ಹಂತವಾಗಿ ಆಹಾರ ಇಲಾಖೆ ಅವಕಾಶವನ್ನು ಕಲ್ಪಿಸಿಕೊಟ್ಟಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಯುವಕ ಕಿಡ್ನ್ಯಾಪ್, ಹಾಸನದಲ್ಲಿ ಬಿಟ್ಟು ಎಸ್ಕೇಪ್!
ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳಗ್ಗೆ 10 ರಿಂದ ಸಂಜೆ 7ರ ವರೆಗೆ ಪಡಿತರ ಚೀಟಿ ತಿದ್ದುಪಡಿ ಮಾಡಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ವೇಳೆ ಫಲಾನುಭವಿ ಹೆಸರು ಬದಲಾವಣೆ, ಪಡಿತರ ಕೇಂದ್ರ ಬದಲಾವಣೆ, ಕಾರ್ಡ್ ಸದಸ್ಯರ ಹೆಸರು ಡಿಲಿಟ್ & ಸೇರ್ಪಡೆ ಮಾಡುವುದು, ಕಾರ್ಡ್ ಮುಖ್ಯಸ್ಥರ ಹೆಸರು ಬದಲಾವಣೆ ಮಾಡಿ ಮನೆಯ ಯಜಮಾನಿ ಯಾರಾಗಬೇಕು ಎನ್ನುವುದನ್ನು ಚೀಟಿಯಲ್ಲಿ ಬದಲಾಯಿಸಬಹುದಾಗಿದೆ.