Sunday, December 22, 2024

ಚಿಕ್ಕಬಳ್ಳಾಪುರದಲ್ಲಿ ಝೀಕಾ ವೈರಸ್‌ ಪತ್ತೆ..!

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿನ ನೆರೆಯ ಜಿಲ್ಲೆ ಚಿಕ್ಕಬಳ್ಳಾಪುರದ ದಿಬ್ಬೂರಹಳ್ಳಿ ಬಳಿಯಲ್ಲಿ ಮಾರಕ ಝೀಕಾ ವೈರಸ್‌ ಪತ್ತೆಯಾಗಿದೆ.

ಜೀಕಾ ವೈರಸ್‌ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳನ್ನು ಹಿಡಿದು ಅವುಗಳಲ್ಲಿ ಮಾರಣಾಂತಿಕ ವೈರಸ್‌ ಇದೆಯೇ ಎಂದು ಪರಿಣಿತರು ಪರೀಕ್ಷೆ ನಡೆಸಿದ್ದರು. ಇದರ ಅನ್ವಯ ಚಿಕ್ಕಬಳ್ಳಾಪುರದ ಆರು ಪ್ರದೇಶಗಳಲ್ಲಿ ಸೊಳ್ಳೆಗಳನ್ನು ಹಿಡಿದು ಪರೀಕ್ಷಿಸಲಾಗಿತ್ತು.

ಇದನ್ನೂ ಓದಿ: ಮಾವನನ್ನು ಇರಿದು ಕೊಂದ ಅಳಿಯ!

ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟದ ಸೊಳ್ಳೆಗಳಲ್ಲಿ ಮಾರಕ ವೈರಸ್‌ ಪತ್ತೆಯಾಗಿದೆ. ಈ ವೈರಸ್​​ ಮನುಷ್ಯರಲ್ಲಿ ಯಾವುದೇ ಸೋಂಕು ಪತ್ತೆ ಆಗಿಲ್ಲ. ಝಿಕಾ ವೈರಸ್​ ದೇಹಕ್ಕೆ ಎಂಟ್ರಿಯಾದರೆ ಜ್ವರ, ತಲೆನೋವು, ಕಣ್ಣು ಕೆಂಪಾಗುತ್ತೆ. ಕೀಲು, ಸ್ನಾಯುಗಳಲ್ಲಿ ವಿಪರೀತ ನೋವು ಉಂಟಾಗುತ್ತದೆ.

ಝೀಕಾ ವೈರಸ್‌ಗೆ ನಿರ್ದಿಷ್ಟ ಚಿಕಿತ್ಸೆ ಹಾಗೂ ಯಾವುದೇ ಲಸಿಕೆ ಇಲ್ಲ. ಮಾರಕ ವೈರಸ್‌ಗಳು ಪತ್ತೆಯಾದ ಬೆನ್ನಲ್ಲೇ ಆರೋಗ್ಯ ಇಲಾಖೆ ಅಧಿಕಾರಿಗಳು ವಿಶೇಷ ಸಭೆ ನಡೆಸಿ, ವೈರಸ್‌ ಹರಡದಂತೆ ತಡೆಯಬೇಕಾದ ಕ್ರಮಗಳ ಕುರಿತಂತೆ ಚರ್ಚಿಸಿದ್ದಾರೆ.

RELATED ARTICLES

Related Articles

TRENDING ARTICLES