Wednesday, January 22, 2025

ಮತ್ತೆ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಗದಗ : 5 ವರ್ಷ ನಾನೇ ಸಿಎಂ ಎಂದು ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಉಲ್ಟಾ ಹೊಡೆದಿದ್ದಾರೆ. ಹೈಕಮಾಂಡ್​ ಹೇಳಿದರೆ ಮಾತ್ರ ಸಿಎಂ ಆಗಿ ಮುಂದುವರಿಯುತ್ತೇನೆ ಎಂದು ಸ್ಪಷ್ಟನೆ ನಿಡಿದ್ದಾರೆ.

ಗದಗದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಆ ಅರ್ಥದಲ್ಲಿ ಹೇಳಿಲ್ಲ. ನಮ್ಮದು ಹೈಕಮಾಂಡ್​ ಪಕ್ಷ, ಹೈಕಮಾಂಡ್​ ತೀರ್ಮಾನಕ್ಕೆ ಬದ್ಧ. ಹೈಕಮಾಂಡ್​ ಹೇಳಿಕೆಗೆ ನಾನು ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

ತಮ್ಮ ಹೇಳಿಕೆಯಿಂದ ಕಾಂಗ್ರೆಸ್​​ ಪಾಳೆಯದಲ್ಲಿ ಸಂಚಲನ ಸೃಷ್ಟಿಯಾಗ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅಲರ್ಟ್ ಆಗಿದ್ದು, ಡ್ಯಾಮೇಜ್​​ ಕಂಟ್ರೋಲ್​ಗೆ ಮುಂದಾಗಿದ್ದಾರೆ. ಇನ್ನೂ ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ನಿನ್ನೆ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಈಗ ನಾನೇ ಸಿಎಂ ಆಗಿದ್ದು, ಮುಂದೆಯೂ ನಾನೇ ಸಿಎಂ ಆಗಿ ಮುಂದುವರಿಯುತ್ತೇನೆ ಎಂದಿದ್ದರು.

ನುಣುಚಿಕೊಂಡ ಸಿದ್ದರಾಮಯ್ಯ

ಈ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, ಮುಖ್ಯಮಂತ್ರಿಗಳು ಏನೇನು ಹೇಳುತ್ತಾರೆಯೋ ಹೇಳಲಿ. ಎಲ್ಲಾ ಬಹಳ ಸಂತೋಷ ಎಂದು ಜಾಣ್ಮೆಯ ಉತ್ತರ ನೀಡಿದ್ದರು. ಈ ಬೆನ್ನಲ್ಲೇ ಸಿಎಂ ಮತ್ತೆ ಯೂಟರ್ನ್ ಹೊಡೆದು ಬೀಸುವ ದೊಣ್ಣೆಯಿಂದ ನುಣುಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES