ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ 18 ಜಿಂಕೆ ಕೊಂಬು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರಗ ಜ್ಞಾನೇಂದ್ರ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು.
ಹೌದು, ಬಸವನಗದ್ದೆಯ ಪ್ರಸನ್ನ ಎಂಬುವರ ಮನೆಯಲ್ಲಿ ಜಿಂಕೆ ಕೊಂಬು, ಕಾಡು ಕೋಣದ ಕೊಂಬು, ಶ್ರೀಗಂಧ ಸಂಗ್ರಹಣೆ ಮಾಡಿದವರನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ: ಕರ್ನಾಟಕದ ಇತಿಹಾಸದಲ್ಲೇ ಇಂಥ ನಾಡ ದ್ರೋಹಿ ಸಿಎಂರನ್ನ ಕಂಡಿರಲಿಲ್ಲ : ಬಿಜೆಪಿ ಆಕ್ರೋಶ
ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ದರ್ಪ ತೋರಿದ ಆರಗ ಜ್ಞಾನೇಂದ್ರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ಡಿಎಫ್ಓಗೆ ದೂರು ಸಲ್ಲಿಸಿದರು.