Thursday, January 23, 2025

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ: ಬಿ.ಎಸ್ ಯಡಿಯೂರಪ್ಪ

ಶಿವಮೊಗ್ಗ: ಆದಷ್ಟು ಬೇಗ ವಿಪಕ್ಷ ನಾಯಕನ ಆಯ್ಕೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರ ಜೊತೆ ಮಾತನಾಡಿದ ಅವರು ಬಿಜೆಪಿ ಪಕ್ಷದಕಲ್ಲಿ ಈಗಲೇ ವಿಪಕ್ಷ ನಾಯಕನ (Opposition Leader) ಆಯ್ಕೆ ತಡವಾಗಿದೆ. ಎಲ್ಲರೂ ವಿಪಕ್ಷ ನಾಯಕನ ಆಯ್ಕೆ ಯಾವಾಗ ಎಂಬ ಪ್ರಶ್ನೆಯನ್ನು ಕೇಳುತ್ತಿದ್ದಾರೆ ಹಾಗಾಗಿ ನಾವು ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಶಾಕ್ : CWRC ಶಿಫಾರಸು ಎತ್ತಿ ಹಿಡಿದ CWMA

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದೆ. ಬಿಜೆಪಿ (BJP) ವತಿಯಿಂದ ಇಂದಿನಿಂದ ಬರ ಅಧ್ಯಯನ ಪ್ರವಾಸ ಆರಂಭವಾಗಿದೆ. ನಾನು ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯ ಶತಮಾನೋತ್ಸವ ಸಮಾರಂಭ ಇರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಹೀಗಾಗಿ ಬರ ಅಧ್ಯಯನ ಪ್ರವಾಸಕ್ಕೆ ಹೋಗಲಾಗಿಲ್ಲ.

ಭಾನುವಾರದಂದು ಬರ ಅಧ್ಯಯನ ಪ್ರವಾಸದ ತಂಡವನ್ನು ಸೇರಿಕೊಳ್ಳುತ್ತೇನೆ ಎಂದು ಮಾಹಿತಿ ನೀಡಿದರು.

 

RELATED ARTICLES

Related Articles

TRENDING ARTICLES