Monday, December 23, 2024

ಇಂದಿನಿಂದ ಹಾಸನಾಂಬೆ ದರ್ಶನ ಆರಂಭ: ಹರಿದು ಬಂದ ಭಕ್ತಸಾಗರ

ಹಾಸನ: ಹಾಸನಾಂಬೆ ಸಾರ್ವಜನಿಕ ದರ್ಶನೋತ್ಸವವು ಇಂದಿನಿಂದ ಆರಂಭವಾಗಿದ್ದು ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ದೇವಿ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ.

ಹಾಸನಾಂಬೆ ದೇವಾಲಯದ ಬಾಗಿಲುಗಳು ಗುರುವಾರ ಮಧ್ಯಾಹ್ನ 12.45 ರ ಸುಮಾರಿಗೆ ತೆರೆಯಲಾಗಿತ್ತು. ಆದರೇ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಿರಲಿಲ್ಲ. ಹೀಗಾಗಿ ಇಂದಿನಿಂದ 12ದಿನಗಳ ಕಾಲ ದೇವಿ ದರ್ಶನಕ್ಕೆ ಜಿಲ್ಲಾಡಳಿತ ಅನುವು ಮಾಡಿಕೊಟ್ಟಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ BBMPಯಿಂದ ಮಾರ್ಗಸೂಚಿ ಬಿಡುಗಡೆ

ವರ್ಷದ ಬಳಿಕ ಶಕ್ತಿ ದೇವತೆ ಹಾಸನಾಂಬೆ ದರ್ಶನ ಪಡೆಯಲು ಆಗಮಿಸುವ ಭಕ್ತರಿಗಾಗಿ ಬೆಳಗ್ಗೆ 6 ರಿಂದ ಸಂಜೆ 6 ರ ವರೆಗೆ ದರ್ಶನ ಮಾಡಬಹುದಾಗಿದೆ, ಇನ್ನೂ ಉಚಿತ ಬಸ್​ ಪ್ರಯಾಣದ ಶಕ್ತಿ ಯೋಜನೆ ಹಿನ್ನೆಲೆ ದೇವಾಲಯಕ್ಕೆ ನಾಡಿನ ವಿವಿಧೆಡೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುವ ನಿರೀಕ್ಷೆಗಳಿದ್ದು ಜಿಲ್ಲಾಡಳಿತ ಹಾಗು ದೇವಾಲಯದ ಆಡಳಿತ ಮಂಡಳಿ ಸಿದ್ದತೆ ಮಾಡಿಕೊಂಡಿದೆ.

RELATED ARTICLES

Related Articles

TRENDING ARTICLES