Wednesday, January 22, 2025

ಹೊಸ ಪಡಿತರ ಕಾರ್ಡ್‌ ವಿತರಣೆ ಪ್ರಕ್ರಿಯೆ ಇಂದಿನಿಂದ ಶುರು : ಸಚಿವ ಕೆ.ಎಚ್.ಮುನಿಯಪ್ಪ

ಹುಬ್ಬಳ್ಳಿ: ಹೊಸ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ವಿತರಣೆ ಪ್ರಕ್ರಿಯೆ ಇಂದಿನಿಂದಲೇ ಆರಂಭಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದುವರಿಗೂ 2 ಲಕ್ಷ 90 ಸಾವಿರ ಅರ್ಜಿಗಳು ಬಂದಿವೆ. ಇದರಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಅರ್ಜಿ ಪರಿಷ್ಕರಣೆ ಮಾಡಿ ಅರ್ಹರಿಗೆ ಕಾರ್ಡ್ ವಿತರಣೆ ಮಾಡಲಾಗುವುದು.  ಈಗಾಗಲೇ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಜನರಿಗೆ ಆದಷ್ಟು ಬೇಗ ಕಾರ್ಡ್ ವಿತರಣೆ ಮಾಡುತ್ತಾಗವೆ ಎಂದರು.

ಅನರ್ಹರು BPL ಕಾರ್ಡ್ ಹೊಂದಿರುವವರ ಕಾರ್ಡ್ ರದ್ದತಿ : ಅನರ್ಹರು ಬಿಪಿಎಲ್ ಕಾರ್ಡ್ ಹೊಂದಿರುವವರ ಕಾರ್ಡ್‌ ರದ್ದತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಫಂಡ್ಸ್ ಹುಟ್ಸೋಕೆ ಆಗಲ್ಲ, ದುಡ್ಡು ಎಲ್ಲಿಂದ ತರ್ತೀರಾ? : ಸಂಸದೆ ಸುಮಲತಾ 

ನಮ್ಮ ಸರ್ಕಾರದ ಕಡೆಯಿಂದ ಅಕ್ಕಿ ತರುವ ಪ್ರಯತ್ನವನ್ನು ಮಾಡುತ್ತಿದ್ದೇವೆ. ಇನ್ನೂ ಪಡಿತರ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಜಾಲಕ್ಕೆ ಕಡಿವಾಣ ಹಾಕಲು ಅಧಿಕಾರಿಗಳ ತಂಡ ಕ್ರಮ ಜರುಗಿಸುತ್ತಿದೆ. ಸಂಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಸ್ವಲ್ಪ ಸಮಯಾವಕಾಶ ತೆಗೆದುಕೊಳ್ಳುತ್ತದೆ ಎಂದರು.

ಚುನಾವಣೆಗೆ ಮುನ್ನ ನಾವು 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಘೋಷಣೆ ಮಾಡಿದ್ದೆವು, ಆದರೆ ಕೇಂದ್ರ ಸರ್ಕಾರ ಅಕ್ಕಿ ಇದ್ದರೂ, ಕೊಡಲು ನಿರಾಕರಣೆ ಮಾಡಿದರು. ಇದರಲ್ಲಿ ರಾಜಕೀಯ ಬೆರೆಸಬಾರದಿತ್ತು. ಆದರೆ ಕೇಂದ್ರ ಸರ್ಕಾರ ಇಲ್ಲಿ ರಾಜಕಾರಣ ಮಾಡಿತು. ನಾವು ಅದಕ್ಕೆ ಸರಿಸಮಾನವಾಗಿ ಜುಲೈನಿಂದ ಹಣ ಕೊಡುತ್ತಿದ್ದೇವೆ ಎಂದು ತಿಳಿಸಿದರು.

 

 

RELATED ARTICLES

Related Articles

TRENDING ARTICLES