Wednesday, January 22, 2025

ಡಿ.ಕೆ ಶಿವಕುಮಾರ್ ನಾಳೆ ಸಿಎಂ ಆದ್ರೆ ಜೆಡಿಎಸ್ ನ 19 ಶಾಸಕರು ಬೆಂಬಲ ನೀಡುತ್ತೇವೆ : ಡಿಕೆಶಿಗೆ ಕುಮಾರಸ್ವಾಮಿ ಬಿಗ್ ಆಫರ್

ಬೆಂಗಳೂರು: ಡಿ.ಕೆ ಶಿವಕುಮಾರ್ ನಾಳೆ ಸಿಎಂ ಆದ್ರೆ ಜೆಡಿಎಸ್ ನ 19 ಶಾಸಕರು ಬೆಂಬಲ ನೀಡುತ್ತೇವೆ ಎಂದು ಡಿಕೆಶಿಗೆ ಹೆಚ್.ಡಿ‌ ಕುಮಾರಸ್ವಾಮಿ ಬಿಗ್ ಆಫರ್ ನೀಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಡಿಸಿಎಂ ಡಿ.ಕೆ.ಶಿವಕುಮಾರ್​ ನಾಳೆ ಸಿಎಂ ಆಗುವುದಾದರೆ ಜೆಡಿಎಸ್​ನ 19 ​​ ಶಾಸಕರ ಬೆಂಬಲವನ್ನು ಕೊಂಡುತ್ತೇವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಸರ್ಕಾರ ಪರಿಸ್ಥಿತಿ ನೋಡಿದರೆ ಎಷ್ಟು ಜನ ಸಿಎಂ ಆಗುತ್ತಾರೆ ಗೊತ್ತಿಲ್ಲ. ಇದನ್ನು ನೋಡಿದರೆ ಈ ಸರ್ಕಾರಕ್ಕೆ ಒಂದು ಹೆಸರು ಇಡಬಹುದು. ಟಿಸಿಎಂ, ಡಿಸಿಎಂ ಸರ್ಕಾರ ಎಂದು ಕರೆಯಬಹುದು. ಟಿಸಿಎಂ ಅಂದರೆ ಟೆಂಪ್ರವರಿ ಸಿಎಂ, ಡಿಸಿಎಂ ಅಂದ್ರೆ ಡೂಪ್ಲಿಕೇಟ್ ಸಿಎಂ ಎಂದು ಕಾಂಗ್ರೆಸ್ ಬಗ್ಗೆ ವ್ಯಂಗ್ಯವಾಡಿದ್ದಾರೆ.
ಮುಖ್ಯಮಂತ್ರಿ ಪದವಿಯ ಬಗ್ಗೆ ಕಾಂಗ್ರೆಸ್‌ನ (Congress) ವಿವಿಧ ಬಣಗಳ ನಾಯಕರ ಪರ-ವಿರೋಧ ಹೇಳಿಕೆಗಳ ನಡುವೆಯೇ ಸಿಎಂ ಸಿದ್ದರಾಮಯ್ಯ (CM Siddaramaiah) ತಮ್ಮ ಸಂಪುಟ ಸದಸ್ಯರಿಗೆ ಉಪಹಾರ ಕೂಟ ಆಯೋಜಿಸಿದ್ದರು.

RELATED ARTICLES

Related Articles

TRENDING ARTICLES