Wednesday, December 25, 2024

ಹಳ್ಳಕ್ಕೆ ಬಿದ್ದ ಬಸ್: ಓರ್ವ ಮಹಿಳೆ ಸಾವು, ಹಲವರಿಗೆ ಗಾಯ!

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್​​​​​​​ ಪ್ರಪಾತಕ್ಕೆ ಉರುಳಿದ ಪರಿಣಾಮ ಸ್ಥಳದಲ್ಲೇ ಓರ್ವ ಮಹಿಳೆ ಸಾವನಪ್ಪಿದ್ದು, ಐವರಿಗೆ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಚೀಕನಹಳ್ಳಿ-ಕಸ್ಕೇಬೈಲು ಕ್ರಾಸ್ ಬಳಿ ನಡೆದಿದೆ.

ಬೆಂಗಳೂರಿನ ಯಲಹಂಕ ನಿವಾಸಿ ಸುರೇಖ ಎಂಬಾಕೆ ಮೃತ ಮಹಿಳೆಯಾಗಿದ್ದು, ಬೆಂಗಳೂರಿಂದ ಹೊರನಾಡಿಗೆ ಹೊರಟಿದ್ದ ಬಸ್ಸಿನಲ್ಲಿ 48ಕ್ಕೂ ಹೆಚ್ಚು ಪ್ರವಾಸಿಗರು ಪ್ರಯಾಣಿಸುತ್ತಿದ್ದರು. ಬೆಂಗಳೂರು-ಹಾಸನ-ಮೂಡಿಗೆರೆ ಮಾರ್ಗವಾಗಿ ಹೊರನಾಡಿಗೆ ಹೋಗುತ್ತಿದ್ದ ವೇಳೆ ಬೆಳಗಿನ ಜಾವ 4:45 ಸಮಯದಲ್ಲಿ ಈ ದುರ್ಘಟನೆ ಜರುಗಿದೆ.

ಇದನ್ನೂ ಓದಿ: ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ ಮೈದುನ!

ಗಾಯಾಳುಗಳನ್ನು ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ, ಸದ್ಯ ಈ ಪ್ರಕರಣ ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES