Tuesday, December 3, 2024

ಅತ್ತಿಗೆ, ಇಬ್ಬರು ಮಕ್ಕಳನ್ನು ಬರ್ಬರವಾಗಿ ಕೊಲೆ ಮಾಡಿದ ಮೈದುನ!

ಹಾವೇರಿ: ತನ್ನ ಅಣ್ಣನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಮೈದುನ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಯಳ್ಳೂರು ಗ್ರಾಮದಲ್ಲಿ ನಡೆದಿದೆ.

ಗೀತಾ ಮರಿಗೌಡ ಮತ್ತು ಇವರ ಮಕ್ಕಳಾದ ಅಕುಲ್, ಅಂಕಿತಾ ಕೊಲೆಯಾದ ದುರ್ದೈವಿಗಳು. ಕುಮಾರಗೌಡ ಮೂವರನ್ನು ಕೊಲೆ ಮಾಡಿ ಪರಾರಿಯಾಗಿರುವ ಮೈದುನ. ಕೌಟುಂಬಿಕ ಕಲಹ ಹಿನ್ನೆಲೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಹಾನಗಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯದ ಅನೇಕ ಕಡೆ ಮಳೆ ಸಾಧ್ಯತೆ!

ಮೃತ ಗೀತಾಳ ಪತಿ ಹೊನ್ನೆಗೌಡ ದುಬೈನಲ್ಲಿ ಕೆಲಸ ಮಾಡುತ್ತಿದ್ದಾರೆ. ಕುಟುಂಬದಲ್ಲಿನ ಜಗಳವೇ ಕೊಲೆಗೆ ಕಾರಣ ಎನ್ನುವ ಶಂಕೆ ವ್ಯಕ್ತವಾಗಿದ್ದು, ಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಾನಗಲ್ ಠಾಣಾ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Related Articles

TRENDING ARTICLES