Sunday, December 22, 2024

ಸಿಎಂಗೆ ಆಡಳಿತ ನಡೆಸಲು ಬರುತ್ತಿಲ್ಲ : ನಳಿನ್ ಕುಮಾರ್ ಕಟೀಲ್

ವಿಜಯಪುರ: ಎರಡು ಬಾರಿ ಮುಖ್ಯಮಂತ್ರಿಯಾದರೂ ಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಎಂದು ನಳಿನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.

ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬರ ಅಧ್ಯಾಯನ ಆರಂಭವಾಗಿದ್ದು,ವಿವಿಧ ಬಿಜೆಪಿ ಮುಂಗಡ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ತಂಡದ ಜೊತೆ ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಜಾಲಗೇರಿ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆದಿದೆಯೇ ಹೊರತು, ರೈತರ ಹಿತ ಕಾಪಾಡಾಲು ಯೋಚಿಸುತ್ತಿಲ್ಲ ಸಿಎಂ ಸಿದ್ದರಾಮಯ್ಯನವರು ವಾಗ್ವಾದ ನಡೆಸಿದ್ದಾರೆ.

ಬಿಜೆಪಿ ರಾಜ್ಯದಾದ್ಯಂತ ಸಂಚರಿಸಿ ಬರ ಅಧ್ಯಯನ ಮಾಡಿದ ಬಳಿಕ ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ, ಬಳಿಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸುತ್ತೇವೆ. ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಕೋರುತ್ತೇವೆ ಎಂದರು.

ಬರ ಸಮಸ್ಯೆಗೆ ಪರಿಹಾರ ನೀಡಿ

ಕೇಂದ್ರದ ಮೇಲೆ ಗೂಬೆ ಕೂರಿಸದೆ ಬರ ಸಮಸ್ಯೆಗೆ ಪರಿಹಾರ ನೀಡಿ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಸಮರ್ಪಕವಾಗಿ ರೈತರಿಗೆ ವಿದ್ಯುತ್ ನೀಡಿ 

ರಾಜ್ಯ ಸರ್ಕಾರ ಸಮರ್ಪಕವಾಗಿ ವಿದ್ಯುತ್‌ ನೀಡಿದ್ದಿರೆ ರೈತರು ಬೆಳೆದ ತಮ್ಮ ಅಲ್ಪಸ್ವಲ್ಪ ಬೆಳೆ ರಕ್ಷಣೆ ಮಾಡಿಕೊಳ್ಳುತ್ತಿದ್ದರು. ಸಮರ್ಪಕವಾಗಿ ವಿದ್ಯುತ್ ನೀಡದ ಕಾರಣ ಪೂರ್ಣ ಪ್ರಮಾಣದಲ್ಲಿ ಕೃಷಿ ನಷ್ಟವಾಗುತ್ತಿದೆ ಎಂದು ಆರೋಪಿಸಿದರು.

ಸರ್ಕಾರ ಉಳಿಸುವ ಪ್ರಯತ್ನವಷ್ಟೇ 

ಸರ್ಕಾರ ಉಳಿಸಿಕೊಳ್ಳಲು ಪ್ರಯತ್ನ ನಡೆದಿದೆಯೇ ಹೊರತು, ರೈತರ ಹಿತ ಕಾಪಾಡಾಲು ಯೋಚಿಸುತ್ತಿಲ್ಲ, ಸರ್ಕಾರದ ವಿರುದ್ಧ ಜನರ ಆಕ್ರೋಶ ಹೆಚ್ಚಾಗಿದೆ ಎಂದರು.

2 ಬಾರಿ ಮುಖ್ಯಮಂತ್ರಿಯಾದರೂ ಆಡಳಿತ ನಡೆಸಲು ವಿಫಲ

ಎರಡು ಬಾರಿ ಮುಖ್ಯಮಂತ್ರಿಯಾದರೂಸಿದ್ದರಾಮಯ್ಯ ಅವರಿಗೆ ಆಡಳಿತ ನಡೆಸಲು ಬರುತ್ತಿಲ್ಲ ಈ ಹಿಂದೆ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಅತಿವೃಷ್ಠಿ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಪರಿಹಾರ ಹಣಕ್ಕೆ ಕಾಯದೇ, ಎನ್ ಡಿಆರ್ ಎಫ್ ಮಾರ್ಗಸೂಚಿ ಮೀರಿ ತಕ್ಷಣ ಸಂತ್ರಸ್ತ ರೈತರಿಗೆ ಪರಿಹಾರ ಕೊಟ್ಟಿದ್ದರು.

ರೈತರಿಗೆ ತಕ್ಷಣವೇ ಸೂಕ್ತ ಪರಿಹಾರ ನೀಡಬೇಕು

ಮಾನ್ಯ ಮುಖ್ಯಮುಂತ್ರಿ ಸಿದ್ದರಾಮಯ್ಯನವರು ಬರ ಸಮಸ್ಸೆಗೆ ತಕ್ಷಣವೇ ಪರಿಹಾರ ನೀಡಬೇಕು ಎಂದು  ಒತ್ತಾಯಿಸಿದರು.

ಕೇಂದ್ರದ ಹಣಕ್ಕಾಗಿಕಾಯಬೇಡಿ 

ರೈತರ ಬರ ಪರಿಹಾರ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರದ ಹಣಕ್ಕಾಗಿ ಕಾಯುವ ಬದಲು ರಾಜ್ಯ ಸರ್ಕಾರ ತನ್ನ ಖಜಾನೆಯಿಂದಲೇ ರೈತರಿಗೆ ಬೆಳೆ ನಷ್ಟ ಪರಿಹಾರ ವಿತರಿಸಲು ಮುಂದಾಗಬೇಕು

 

 

 

 

 

RELATED ARTICLES

Related Articles

TRENDING ARTICLES