Wednesday, January 22, 2025

ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇದೆ, ಸುಳ್ಳು ಸೃಷ್ಟಿ ಬೇಡ : ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕಾಂಗ್ರೆಸ್​ನಲ್ಲಿ ಎಲ್ಲವೂ ಸರಿ ಇದೆ, ಆದರೆ, ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿ ಇಲ್ಲ ಎನ್ನುವುದು ಸೃಷ್ಟಿ ಮಾಡುತ್ತಿದ್ದಾರೆ. ಈ ವಿಚಾರವನ್ನು ನಾವೇ ಬಗೆಹರಿಸಿಕೊಳ್ಳುತ್ತೇವೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಮ್ಮಲ್ಲಿ ಎಲ್ಲವು ಕೂಡ ಸರಿ ಇದೆ. ನಮ್ಮಲ್ಲಿ ಸರಿ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಶೀಘ್ರವೇ ರಾಜ್ಯಸರ್ಕಾರ ಪತನ : ಕೆ.ಎಸ್.ಈಶ್ವರಪ್ಪ

ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.ಜನರ ಬಳಿ ಧೈರ್ಯದಿಂದ ಹೋಗಿ ಚುನಾವಣೆಗೆ ಹೋಗುತ್ತೇವೆ. ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ ಆದರೆ, ಬಿಜೆಪಿಯವರು ಅದನ್ನು ಕಳೆದುಕೊಂಡಿದ್ದಾರೆ ಎಂದು ಕಿಡಿಕಾರಿದರು. ಕಾಂಗ್ರೆಸ್‌ನಲ್ಲಿ ಯಾವುದೇ ಅಸಮಾಧಾನ ಇಲ್ಲ, ನಮ್ಮನೆಯ ವಿಚಾರವನ್ನು ನಾವು ಸರಿ ಮಾಡಿಕೊಳ್ಳುತ್ತೇವೆ ಎಂದರು.

 

 

 

 

RELATED ARTICLES

Related Articles

TRENDING ARTICLES