Saturday, May 18, 2024

ಇಂದು ಪಾಕ್‌- ನ್ಯೂಜಿಲೆಂಡ್‌ ಮುಖಾಮುಖಿ: ಮಳೆ ಅಡ್ಡಿಪಡಿಸುವ ಸಾಧ್ಯತೆ!

ಬೆಂಗಳೂರು: ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ವಿಶ್ವಕಪ್ 2023ರ 35 ನೇ ಪಂದ್ಯದಲ್ಲಿ ನ್ಯೂಜಿಲೆಂಡ್ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿದ್ದು ಮಳೆ ಅಡ್ಡಿಪಡಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಈ ವಿಶ್ವಕಪ್​ನಲ್ಲಿ ಸತತ ಗೆಲುವುಗಳ ಮೂಲಕ ಉತ್ತಮ ಆರಂಭ ಪಡೆದುಕೊಂಡಿದ್ದ ನ್ಯೂಜಿಲೆಂಡ್ ಸೋಲಿನ ಸುಳಿಗೆ ಸಿಲುಕಿದೆ. ಇತ್ತ ಪಾಕಿಸ್ತಾನ ತಂಡ ಕೂಡ 4 ಪಂದ್ಯಗಳಲ್ಲಿ ಸೋತು ಸೆಮಿಫೈನಲ್‌ನ ರೇಸ್‌ನಿಂದ ಹೊರಗುಳಿಯುವ ಆತಂಕದಲ್ಲಿದೆ.

ಇದನ್ನೂ ಓದಿ: ನೇಪಾಳದಲ್ಲಿ ಪ್ರಭಲ ಭೂಕಂಪನ: 6.4 ತೀವ್ರತೆ ದಾಖಲು!

ನ್ಯೂಜಿಲೆಂಡ್ ತಂಡ ಆಡಿರುವ 7 ಪಂದ್ಯಗಳಲ್ಲಿ 4 ರಲ್ಲಿ ಗೆದ್ದಿದ್ದರೆ, ಪಾಕಿಸ್ತಾನ ತಂಡ 7 ಪಂದ್ಯಗಳಲ್ಲಿ 3ರಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯ ಉಭಯ ತಂಡಗಳಿಗೂ ಮಾಡು ಇಲ್ಲವೇ ಮಡಿ ಪಂದ್ಯದಂತ್ತಾಗಿದೆ. ಇಂದು ಬೆಳಗ್ಗೆ 10.30ಕ್ಕೆ ಪಂದ್ಯ ಆರಂಭವಾಗಲಿದೆ.

ಇನ್ನು ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕಿವಿಸ್​ ಮತ್ತು ಪಾಕ್​ ನಡುವಿನ ಪಂದ್ಯಕ್ಕೆ ಮಳೆಯು ಅಡ್ಡಿಯಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗುತ್ತಿದೆ.

RELATED ARTICLES

Related Articles

TRENDING ARTICLES