ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರಿ ಮಳೆಯಾಗಲಿದ್ದು, ಕರಾವಳಿ ಹಾಗೂ ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೊಅಲರ್ಟ್ ಘೋಷಿಸಿದೆ.
ಪ್ರಮುಖವಾಗಿ ಕರಾವಳಿಯ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಯೆಲ್ಲೊಅಲರ್ಟ್ ಘೋಷಿಸಿದೆ. ನವೆಂಬರ್ 5ರಿಂದ ನವೆಂಬರ್ 7 ರವರೆಗೆ ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್‌ನ ಎಚ್ಚರಿಕೆ ನೀಡಲಾಗಿದೆ.
ಇದನ್ನೂ ಓದಿ: ಜಮೀನು ವಿಚಾರಕ್ಕೆ ಬಂದೂಕಿನಿಂದ ಶೂಟ್ ಮಾಡಿದ ದುಷ್ಕರ್ಮಿಗಳು, ತಂದೆ ಮಡಿಲಲ್ಲೇ ಪ್ರಾಣಬಿಟ್ಟ ಮಗ
ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆಯು ಮುನ್ಸೂಚನೆ ನೀಡಿದೆ.