Wednesday, May 1, 2024

ನಮಗೆ ನ್ಯಾಯ ಕೊಡದಿದ್ರೆ, ಲೋಕಸಭೆಯಲ್ಲಿ ಕಾಂಗ್ರೆಸ್​ಗೆ ಬಹುದೊಡ್ಡ ಸಮಸ್ಯೆ ಆಗುತ್ತೆ : ಜಯಮೃತ್ಯುಂಜಯ ಶ್ರೀ ಎಚ್ಚರಿಕೆ

ಕೊಪ್ಪಳ : ನಮಗೆ ನ್ಯಾಯ ಕೊಡದೆ ಹೋದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುದೊಡ್ಡ ಸಮಸ್ಯೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ಅವರು ಗಂಭೀರವಾಗಿ ಚಿಂತನೆ ಮಾಡಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಇಷ್ಟೊಂದು ಹೋರಾಟ ಮಾಡಿದರೂ ಸಿಎಂ ಸಿದ್ದರಾಮಯ್ಯನವರು ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ನೀವು ಹೀಗೆ ಮಾಡಿದ್ರೆ ನಿಮಗೂ ದೊಡ್ಡ ಸಮಸ್ಯೆ ಆಗುತ್ತೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದರು.

ಸಿದ್ದರಾಮಯ್ಯ ನಿರ್ಲಕ್ಷ್ಯ ಮಾಡ್ತಿದ್ದಾರೆ

ಪ್ರಧಾನಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆಯಲ್ಲಿ ಹಿಂದಿನ ಸರ್ಕಾರ 2 ಡಿ ಮೀಸಲಾತಿ ನೀಡಿತ್ತು. ಅದಕ್ಕೆ ನಾವು ಸ್ವಾಗತ ಮಾಡಿದ್ದೆವು. ಆದರೆ, ಚುನಾವಣೆ ನೀತಿ ಸಂಹಿತೆ ಜಾರಿ ಆಗಿ ಅದು ಅನುಷ್ಠಾನ ಆಗಲಿಲ್ಲ. ಆದರೆ, ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ಮೇಲೆ ಕರೆದು ಚರ್ಚೆ ಮಾಡ್ತಿನಿ ಅಂದಿದ್ರು. ನಾಲ್ಕು ತಿಂಗಳಾಯ್ತು ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಕೊಡ್ತಾ ಇಲ್ಲ. ಎಲ್ಲೋ ಒಂದು ಕಡೆ ನಮ್ಮ ಸಮಾಜವನ್ನು ಸಿಎಂ ಸಿದ್ದರಾಮಯ್ಯನವರು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

.10ರಂದು ರಾಷ್ಟ್ರೀಯ ಹೆದ್ದಾರಿ ಬಂದ್

ರಾಜ್ಯ ಸರ್ಕಾರದ ಬಗ್ಗೆ ನಮಗೆಲ್ಲ ಅಸಮಾಧಾನ ಇದೆ. ಲೋಕಸಭಾ ಚುನಾವಣೆ ಒಳಗೆ ಸಮಾಜಕ್ಕೆ ನ್ಯಾಯ ಕೊಡಬೇಕು. ನವೆಂಬರ್ 10ರಂದು ದಾವಣಗೆರೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಲಿಂಗ ಪೂಜೆ ಸಲ್ಲಿಸುವ ಮೂಲಕ ಹೋರಾಟ ಮಾಡ್ತಿವಿ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

RELATED ARTICLES

Related Articles

TRENDING ARTICLES