Wednesday, January 22, 2025

ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ : ಸಿ.ಟಿ. ರವಿ

ಚಿಕ್ಕಬಳ್ಳಾಪುರ : ನಾನು ಹಿಂದೂ ಆಗಿಯೇ ಹುಟ್ಟಿದ್ದೇನೆ, ಹಿಂದೂ ಆಗಿಯೇ ಸಾಯುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್​​​ ಅವರಿಗೆ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಸಿ.ಟಿ ರವಿ ತಿರುಗೇಟು ನೀಡಿದ್ದಾರೆ.

ಚಿಕ್ಕಬಳ್ಳಾಪುರದ ಮರಳುಕುಂಟೆ ಗ್ರಾಮದಲ್ಲಿ ಬರ ಅಧ್ಯಯನದ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ್ದಾರೆ. ಬಿಜೆಪಿಯವರಿಗೆ ಶ್ರೀರಾಮನೇ ಚುನಾವಣಾ ಅಜೆಂಡಾ ಎಂಬ ಪರಮೇಶ್ವರ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.

ರಾಮಮಂದಿರ ನಿರ್ಮಾಣದ ಹೋರಾಟದಲ್ಲಿ ಬಿಜೆಪಿ ನೇರವಾಗಿ ತೊಡಗಿಸಿಕೊಂಡಿತ್ತು. ರಾಮಮಂದಿರಕ್ಕೆ ವಿರೋಧ ಮಾಡಿದ್ದು ಕಾಂಗ್ರೆಸ್ ಪಕ್ಷ. ಹಜ್ ಯಾತ್ರೆಗೆ ಕಳಿಸೋದು ಮಾತ್ರ ಜಾತ್ಯಾತೀತತೆಯೇ? ಅಯೋಧ್ಯೆಗೆ ಯಾತ್ರೆ ಕಳುಹಿಸಿದರೆ ಜಾತ್ಯಾತೀತತೆಗೆ ಭಂಗ ಬರುತ್ತದೆಯೇ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಅಜೆಂಡಾ ರಾಮ

ಉಚಿತವಾಗಿ ರಾಮ ಮಂದಿರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಛತ್ತಿಸ್​​ಗಢದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಇದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್​ ವ್ಯಂಗ್ಯವಾಡಿದ್ದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಅವರು ಹೇಳುತ್ತಾರೆ, ಅವರ ಅಜೆಂಡಾ ರಾಮ ತಾನೇ.. ಶ್ರೀರಾಮನ ಅಜೆಂಡಾ. ಅವರಿಗೆ ರಾಮನ ಬಿಟ್ರೆ ಏನೂ ಇಲ್ಲ ಎಂದು ಲೇವಡಿ ಮಾಡಿದ್ದರು.

RELATED ARTICLES

Related Articles

TRENDING ARTICLES