Monday, December 23, 2024

ಕಳೆದ ಐದು ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳೇ ಆಗಿಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ಕಳೆದ ಐದು ವರ್ಷಗಳಲ್ಲಿ ಮೈಸೂರಿನಲ್ಲಿ ಅಭಿವೃದ್ಧಿ ಕೆಲಸಗಳು ಆಗಿಲ್ಲ. ಹೀಗಾಗಿ, ಈಗ ಇಡೀ ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಬೇಕು ಎಂದು ಮೈಸೂರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದರು.

ಮೈಸೂರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಆಯೋಜಿಸಿದ್ದ ಔತಣ ಕೂಟದಲ್ಲಿ ದಸರಾ ಯಶಸ್ಸಿಗೆ ಕಾರಣರಾದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು.

ಒಗ್ಗಟ್ಟಿನ ಶ್ರಮ ಮತ್ತು ಕೆಲಸಗಳ ಹಂಚಿಕೆ ಮೂಲಕ ಸಾರ್ವಜನಿಕರಿಂದ ಆಕ್ಷೇಪಣೆ ಇಲ್ಲದಂತೆ ದಸರಾ ಯಶಸ್ವಿಗೊಳಿಸಿದ್ದಕ್ಕೆ ಜಿಲ್ಲಾ ಮಟ್ಟದ ಅಧಿಕಾರಿಗಳ ಕಾರ್ಯಕ್ಷಮತೆ ಶ್ಲಾಘನೀಯ. ಅಧಿಕಾರಿಗಳಿಗೆ ಜನಪರವಾದ ಮನಸ್ಸು, ಕಾಳಜಿ, ಹೃದಯ ಇದ್ದರೆ ಮಾತ್ರ ಜನಪರ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? : ಕೆಂಪಣ್ಣರನ್ನ ಅರೆಸ್ಟ್ ಮಾಡಿದ್ರೆ ಡಿಕೆಶಿಗೆ ಹಣ ತಲುಪಿದೆಯೋ? ಇಲ್ಲವೋ? ತಿಳಿಯಲಿದೆ : ಕೆ.ಎಸ್ ಈಶ್ವರಪ್ಪ

ಅಧಿಕಾರಿಗಳ ಜನಪ್ರಿಯತೆಯೂ ಹೆಚ್ಚುತ್ತದೆ

ಅಧಿಕಾರಿಗಳು ಅರ್ಪಣಾ ಮನೋಭಾವದಿಂದ ಕೆಲಸ ಮಾಡಿದರೆ ಪರಿಣಾಮಕಾರಿ ಅಭಿವೃದ್ಧಿ ಸಾಧ್ಯ. ಅಧಿಕಾರಿಗಳು ಜನರ ನಡುವೆ ಇದ್ದರೆ ಅಧಿಕಾರಿಗಳ ಜನಪ್ರಿಯತೆಯೂ ಹೆಚ್ಚುತ್ತದೆ. ಜನರ ಸಮಸ್ಯೆಗಳೂ ಅರ್ಥ ಆಗುತ್ತವೆ. ಸಮಸ್ಯೆ ಅರ್ಥವಾದಷ್ಟೂ ಪರಿಣಾಮಕಾರಿ ಪರಿಹಾರ ಒದಗಿಸಲು ಸಾಧ್ಯ ಎಂದು ತಿಳಿಸಿದರು.

RELATED ARTICLES

Related Articles

TRENDING ARTICLES