Sunday, October 6, 2024

ಇಂದು ಭಾರತ-ದಕ್ಷಿಣ ಆಫ್ರಿಕಾ ಮುಖಮುಖಿ!

ಬೆಂಗಳೂರು: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು ಮಹತ್ವದ ಪಂದ್ಯ ನಡೆಯಲಿದೆ. ಇದೇ ಮೊದಲ ಬಾರಿಗೆ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದೆ.

ಕೋಲ್ಕತ್ತಾ ಈಡನ್ ಗಾರ್ಡನ್ಸ್ ಮೈದಾನ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ತೆಂಬ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ಪಂದ್ಯಗಳ ನಡುವಣ ಕಾಳಗಕ್ಕೆ ಸಾಕ್ಷಿಯಾಗಲಿದೆ.

ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ: ಕುಟುಂಬಗಳ ನಡುವೆ ಮಾರಮಾರಿ! 

ಈ ಬಾರಿಯ ವಿಶ್ವಕಪ್​ನಲ್ಲಿ ಭಾರತ ಆಡಿರುವ ಎಲ್ಲ 7 ಪಂದ್ಯಗಳಲ್ಲಿ ಗೆದ್ದು ಸೆಮಿ ಫೈನಲ್​ಗೆ ಕ್ವಾಲಿಫೈಯರ್ ಆಗಿದೆ. ಇತ್ತ ದಕ್ಷಿಣ ಆಫ್ರಿಕಾ ಆಡಿರುವ 7 ಪಂದ್ಯಗಳ ಪೈಕಿ ಆರರಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ. ಹೀಗಾಗಿ ಹರಿಣಗಳ ಪಡೆ ಭಾರತಕ್ಕೆ ಸುಲಭ ಸವಾಲಂತು ಅಲ್ಲವೇ ಅಲ್ಲ. ಟೀಮ್ ಇಂಡಿಯಾಕ್ಕೆ ಜಯಕೂಡ ಮುಖ್ಯ ಆಗಿರುವ ಕಾರಣ ಹೊಸ ಆಟಗಾರನನ್ನು ಕರೆತರುವ ಪ್ರಯತ್ನ ರೋಹಿತ್ ಮಾಡಬಹುದು.

RELATED ARTICLES

Related Articles

TRENDING ARTICLES