Sunday, December 22, 2024

ಬೈಕ್​ ಗೆ ಸಿಮೆಂಟ್ ಲಾರಿ ಡಿಕ್ಕಿ; ಬೈಕ್ ಸವಾರನ ಸ್ಥಿತಿ ಚಿಂತಾಜನಕ!

ಚಿಕ್ಕಬಳ್ಳಾಪುರ: ಬೈಕ್​​ಗೆ ಸಿಮೆಂಟ್ ಲಾರಿ ಡಿಕ್ಕಿಯಾಗಿದ್ದು ಬೈಕ್​ ಸವಾರನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಬಳಿ ನಡೆದಿದೆ.

ಬಾಗೇಪಲ್ಲಿ ಕಡೆಯಿಂದ ಬೆಂಗಳೂರು ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಸಿಮೆಂಟ್​ ಲಾರಿ ಬೈಕ್​ ಗೆ ಗುದ್ದಿದೆ. ಸದ್ಯ ಬೈಕ್​ ಸವಾರನ ಸ್ಥಿತಿ ಚಿಂಚಾಜನಕವಾಗಿದ್ದು ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ಬೈಕ್​ ಸವಾರ ಮಾಹಿತಿ ಲಭ್ಯವಾಗಿಲ್ಲ. ಸಿಮೆಂಟ್ ಲಾರಿ ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಇದೇ ವೇಳೆ ಸಿಮೆಂಟ್​ ಲಾರಿಯಲ್ಲಿ ಬೆಂಕಿ ಹೊತ್ತಿಕೊಂಡು ಉರಿದಿದೆ.

ಇದನ್ನೂ ಓದಿ: ದೀಪಾವಳಿ ಹಬ್ಬಕ್ಕೆ ಬಸ್ ಟಿಕೆಟ್ ದರ ಹೆಚ್ಚಳ: ಜನರ ಜೇಬಿಗೆ ಕತ್ತರಿ

ಈ ಸಂಬಂಧ ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES