Monday, December 23, 2024

ಕಾಂಗ್ರೆಸ್ ಕಾಂಗ್ರೆಸ್ ಬದುಕಿದ್ದೂ ಸತ್ತಂತಿದೆ : ಮಾಜಿ ಸಿಎಂ ಯಡಿಯೂರಪ್ಪ

ತುಮಕೂರು : ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಬದುಕಿದ್ದೂ ಸತ್ತಂತಿದೆ. ತುಮಕೂರು ಜಿಲ್ಲೆಯ ಇಬ್ಬರು ಸಚಿವರಿದ್ದಾರೆ, ಸಮಸ್ಯೆ ತಿಳಿದುಕೊಂಡು ಸ್ಥಳದಲ್ಲೇ ಬಗೆಹರಿಸುವ ಕೆಲಸ ಮಾಡಬೇಕಿತ್ತು. ಆದರೆ, ನಾನೇ ಖುದ್ದಾಗಿ ಬಂದು ಸಮಸ್ಯೆ ಆಲಿಸಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಬಿ.ಎಸ್ ಯಡಿಯೂರಪ್ಪ ಗುಡುಗಿದರು.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ತುಮಕೂರು ಕೈಗಾರಿಕೆಯಲ್ಲಿ ಬಹಳಷ್ಟು ಅಭಿವೃದ್ಧಿ ಆಗುತ್ತಿದೆ. ಚೇಂಬರ್ ಆಫ್ ಕಾಮರ್ಸ್ ಮುಖಂಡರು ಜ್ವಲಂತ ಸಮಸ್ಯೆಗಳನ್ನ ಗಮನಕ್ಕೆ ತಂದಿದ್ದಾರೆ. ವಿದ್ಯುತ್ ಅಭಾವ, ಕುಡಿಯುವ ನೀರಿನ ಸಮಸ್ಯೆ, ದುಡಿಯುವ ಕೈಗಳಿಗೆ ಕೆಲಸ ಇಲ್ಲ ಎಂದು ಹೇಳಿದರು.

ನಾವು ಬರ ಅಧ್ಯಯನ ಮಾಡ್ತಿವಿ ಅಂದಾಗ ಡಿಸಿಎಂ ಡಿ.ಕೆ. ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಹಗುರವಾಗಿ ಮಾತನಾಡಿದ್ದಾರೆ. ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಕೈಗಾರಿಕೆಗಳು ಮುಚ್ಚುವ ಹಂತಕ್ಕೆ ಬಂದಿವೆ. ಮತ್ತೊಂದು ಕಡೆ ವಿದ್ಯುತ್ ಬೆಲೆ ಏರಿಕೆ ಮಾಡಿದ್ದಾರೆ. ಈ ಎಲ್ಲಾ ಸಮಸ್ಯೆಗಳಿಗೆ ಸರ್ಕಾರ ಪರಿಹಾರ ಹುಡುಕುವ ಪ್ರಯತ್ನ ಮಾಡಬೇಕು. ಇಲ್ಲವಾದರೆ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದರು.

ಸಿಎಂ, ಡಿಸಿಎಂಗೆ ಎಚ್ಚರಿಕೆ ಕೊಡ್ತಿದ್ದೇವೆ

ಸಿಎಂ, ಡಿಸಿಎಂಗೆ ಎಚ್ಚರಿಕೆ ಕೊಡ್ತಿದ್ದೇವೆ. ಕೇಂದ್ರ ತಂಡ ಬರ ಅಧ್ಯಯನ ನಡೆಸಿದೆ. ಕೇಂದ್ರ ಪರಿಹಾರ ಕೊಟ್ಟೆ ಕೊಡುತ್ತದೆ. ನಾವು ಅಧಿಕಾರದಲ್ಲಿದ್ದಾಗ ಅತಿವೃಷ್ಟಿ ಹಾಗೂ ಅನಾವೃಷ್ಟಿ ಸಂಭವಿಸಿದ್ದೆ. ಕೇಂದ್ರ ಸರ್ಕಾರ ಅನುದಾನ ಕೊಡಲಿ ಅಂತಾ ಕಾಯ್ತಾ ಇರಲಿಲ್ಲ. ತಕ್ಷಣವೇ ಅನುದಾನ ಕೊಟ್ಟು, ಆ ನಂತರ ಕೇಂದ್ರ ಕೊಟ್ಟಾಗ ಸರಿದೂಗಿಸಿಕೊಳ್ಳುತ್ತಿದ್ದೆವು ಎಂದು ಸಿಎಂ ಸಿದ್ದರಾಮಯ್ಯಗೆ ಯಡಿಯೂರಪ್ಪ ಚಾಟಿ ಬೀಸಿದರು.

RELATED ARTICLES

Related Articles

TRENDING ARTICLES