ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರದಲ್ಲಿ ಜೋರು ಮಳೆಯಾಗಲಿದೆ. ಹೀಗಾಗಿ, ಈ ಜಿಲ್ಲೆಗಳಿಗೆ ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.
ಉಳಿದಂತೆ, ಬಾಗಲಕೋಟೆ, ಧಾರವಾಡ, ಬೆಳಗಾವಿ, ಗದಗ, ಕೊಪ್ಪಳ, ಹಾವೇರಿ ಹಾಗೂ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.
ಬೆಂಗಳೂರಿನಲ್ಲೂ ಜೋರು ಮಳೆ
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ಎರಡೂ ದಿನ ಮೋಡ ಕವಿದ ವಾತಾವರಣ, ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.