Wednesday, January 22, 2025

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ಆಭಾರಿ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ಹೃದಯ ವೈಶಾಲ್ಯತೆಗೆ ಆಭಾರಿ ಎಂದು ಹೆಚ್.ಡಿ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಜೆಡಿಎಸ್​ (JDS) ರಾಜ್ಯದಲ್ಲಿ ಬರಪರಿಸ್ಥಿತಿಯ ವೀಕ್ಷಣೆಗೆ ರೈತ ಸಾಂತ್ವನ ಯಾತ್ರೆ ಕೈಗೊಂಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಸ್ವಾಗತ ಮಾಡಿದ್ದಾರೆ. ಅಲ್ಲದೇ ಜೆಡಿಎಸ್ ನೀಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎನ್ನುವ ಮಾರ್ಮಿಕ ಹೇಳಿಕೆ ತಿರುಗೇಟು ನೀಡಿದ್ದಾರೆ.

ನಾವು ರೈತ ಸಾಂತ್ವನ ಯಾತ್ರೆ ಅನುಭವವನ್ನು ಕೇಂದ್ರದ ಜತೆ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ.

ಬರ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಅನುಮಾನಾಸ್ಪದ ಬಾಕ್ಸ್ ಪತ್ತೆ : ರಾಜ್ಯ ಸರ್ಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು: ಚನ್ನಬಸಪ್ಪ

ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ?

236 ತಾಲೂಕುಗಳಲ್ಲಿ 216 ತಾಲೂಕು ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ ಸರಿ. 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದ್ದೀರಿ. ಈ ಹಣವನ್ನು ಯಾರಿಗೆ ಹಂಚಿದ್ದೀರಿ? ಎಂದು ಲೆಕ್ಕ ಕೇಳಿದ್ದಾರೆ.

 

 

 

RELATED ARTICLES

Related Articles

TRENDING ARTICLES