ಬೆಂಗಳೂರು : ಸರ್ಕಾರದ ಬಳಿ ಹಣವಿಲ್ಲ ದಿವಾಳಿಯಾಗಿದೆ, ಬದಕಿದ್ದೂ ಸತ್ತಂತೆ ಇದೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರ ಕುಂಟು ನೆಪ ಹೇಳಿ ವೇತನ ಆಯೋಗದ ಅವಧಿ ವಿಸ್ತರಿಸಿದೆ. ಸರ್ಕಾರದ ಬಳಿ ಬರ ಎದುರಿಸಲು, ಗ್ಯಾರಂಟಿಗಳ ಜಾರಿಗೆ ಹಣ ಇಲ್ಲ. ಸರ್ಕಾರಿ ನೌಕಕರರಿಗೆ ವೇತನ ಪಾವತಿಸಲೂ ಹಣ ಇಲ್ಲ. ಸರ್ಕಾರ ಒಂದು ರೀತಿಯಲ್ಲಿ ದಿವಾಳಿಯಾಗಿದೆ.
ನಮ್ಮ ಸರ್ಕಾರ ಇದ್ದಾಗ ದೇಶದಲ್ಲೇ ಅಭಿವೃದ್ಧಿ ಹೊಂದಿದ ರಾಜ್ಯ ನಮ್ಮದಾಗಿತ್ತು. ಈಗ ಅಧಿಕಾರಕ್ಕೆ ಬಂದ ಐದೇ ತಿಂಗಳಲ್ಲಿ ಎಲ್ಲ ರಂಗಗಳಲ್ಲೂ ಕಾಂಗ್ರೆಸ್ ವಿಫಲವಾಗಿದೆ. ಈ ಸರ್ಕಾರ ಬದುಕಿದ್ದೂ ಸತ್ತಂತೆ ಆಗಿದೆ. ಕುಂಟು ನೆಪ ಹೇಳಿಕೊಂಡು ಕಾಂಗ್ರೆಸ್ನವರು ಕಾಲಹರಣ ಮಾಡುತ್ತಿದ್ದಾರೆ.
ಇದನ್ನೂ ಓದಿ: ಹಾಸನಾಂಬೆ ದೇವಸ್ಥಾನಕ್ಕೆ ಹಾಲಿ-ಮಾಜಿ ಮುಖ್ಯಮಂತ್ರಿ ಭೇಟಿ
ಬಹಳ ಕಾಲ ಇವರನ್ನು ಹೀಗೇ ಬಿಡಲು ಆಗಲ್ಲ. ನಮ್ಮೆಲ್ಲಾ ಮುಖಂಡರೂ ಚರ್ಚೆ ಮಾಡಿ ಇದೆಲ್ಲದರ ವಿರುದ್ಧ ಹೋರಾಟ ಮಾಡಲು ಚಿಂತನೆ ನಡೆಸುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಟೀಕೆ ವಿಚಾರವಾಗಿ ಮಾತನಾಡಿದ ಅವರು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಬೇಜವಾಬ್ದಾರಿ ಹೇಳಿಕೆಗಳಿಗೆ ನಾನು ಉತ್ತರ ಕೊಡಲ್ಲ. ಇಡೀ ಜಗತ್ತೇ ಮೆಚ್ಚಿದ ಪ್ರಧಾನಿಯವರ ಬಗ್ಗೆ ಟೀಕೆ ಮಾಡುವಷ್ಟು ದುರಹಂಕಾರ ಇವರಿಗೆ ಬಂದಿದೆ. ಇದನ್ನು ಜನ ಮೆಚ್ಚುವುದಿಲ್ಲ, ಇವರಿಗೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು