ಹಾಸನ:ಹಾಸನಾಂಬ ದೇವಿ ದರ್ಶನೋತ್ಸವದ ಐದನೇ ದಿನದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ದೇವಿಯ ದರ್ಶನ ಪಡೆಯಲಿದ್ದಾರೆ.
ಹಾಸನದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಹಾಸನಾಂಬ ದೇವಿಯ ದೇವಸ್ಥಾನ. ವರ್ಷಕ್ಕೆ ಒಮ್ಮೆ ಮಾತ್ರವೇ ತೆರೆಯುವಂತ ಗರ್ಭಗುಡಿ ನವೆಂಬರ್.14ರಿಂದ ದೇವಿ ಮಹೋತ್ಸವ ಆರಂಭವಾಗಿದೆ. ವರ್ಷಕ್ಕೆ ಮಾತ್ರ ಈ ದೇವಲಯದ ಗರ್ಭಗುಡಿ ತೆರೆಯುವುದು ವಿಶೇಷ.
ಹೀಗೆ ವರ್ಷಕ್ಕೆ ಒಮ್ಮೆ ಮಾತ್ರವೇ ತೆರೆದು, ಭಕ್ತರಿಗೆ ದರ್ಶನ ನೀಡುವ ಹಾಸನಾಂಬ ದೇವಿಯ ದೇವಾಲಯಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಹಾಸನಕ್ಕೆ ಬರಲಿರುವ ಸಿದ್ದರಾಮಯ್ಯ ಮಧ್ಯಾಹ್ನ 12.30ಕ್ಕೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ನಂತರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಸೇರಿದಂತೆ ಜಿಲ್ಲೆಯ ಶಾಸಕರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆಯಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ. ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.