Friday, May 10, 2024

ಬಿಬಿಎಂಪಿ ವಾರ್​​​ ರೂಂಗೆ ದಿಢೀರ್ ಭೇಟಿ ಕೊಟ್ಟ ಡಿ.ಕೆ ಶಿವಕುಮಾರ್

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಾಗುತ್ತದ್ದು, ರಸ್ತೆಗಳೆಲ್ಲವೂ ಜಲಾವೃತ್ತಗೊಂಡಿವೆ. ಇದರ ಪರಿಣಾಮ ವಾಹನ ಸವಾರರು ನಿಗದಿತ ಸ್ಥಳಗಳಿಗೆ ತೆರಳಲು ಕಷ್ಟಪಡುತ್ತಿದ್ದಾರೆ.

ಯಲಹಂಕ ರಸ್ತೆ ಕೋಗಿಲು ಕ್ರಾಸ್ ಬಳಿ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್‌ಗೆ ನೀರು ನುಗ್ಗಿದ್ದರಿಂದ ವಾಹನಗಳು ನೀರಿನಲ್ಲಿ ಮುಳುಗಿದ್ದವು.

ಬಾಣಸವಾಡಿ ಹಾಗೂ ಫ್ರೆಸರ್ ಟೌನ್ ಬಳಿಯ ಪ್ರದೇಶಗಳಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ರಸ್ತೆಯುದ್ದಕ್ಕೂ ನೀರು ಹರಿಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡಿದರು. ಮಳೆಯಿಂದಾಗಿ ಶ್ರೀರಾಂಪುರ ಅಂಡರ್ ಪಾಸ್ ಕೆರೆಯಂತಾಗಿತ್ತು.

ಇದನ್ನೂ ಓದಿ: ಹಾಸನಾಂಬೆ ದೇವಸ್ಥಾನಕ್ಕೆ ಹಾಲಿ-ಮಾಜಿ ಮುಖ್ಯಮಂತ್ರಿ ಭೇಟಿ

ಮಳೆ ಪರಿಸ್ಥಿತಿಯ ಮಾಹಿತಿ ಪಡೆಯಲು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಬಿಬಿಎಂಪಿ ವಾರ್ ರೂಂಗೆ ಭೇಟಿ ನೀಡಿದ್ದರು. ಮಳೆ ಅವಾಂತರದಿಂದ ನಾಲ್ಕು ಮರಗಳು ಧರೆಗುರುಳಿವೆ. ಬೆಂಗಳೂರು ಪೂರ್ವ ವಲಯದಲ್ಲಿ 1, ಮಹದೇವಪುರ ವಲಯದಲ್ಲಿ ಒಂದು ಮರ, ಬೆಂಗಳೂರು ದಕ್ಷಿಣದಲ್ಲಿ ಎರಡು ಮರ ಧರೆಗುರುಳಿವೆ.

ರಸ್ತೆಯಲ್ಲಿ ಚರಂಡಿ ನೀರು ತುಂಬಿದ್ದರಿಂದ ವಾಹನ ಸವಾರರು ಪರದಾಡಿದರು. ನಗರದ ಏಳು ವಲಯಗಳ ಪೈಕಿ 18 ಕಡೆ ಡ್ರೈನೇಜ್ ನೀರು ರಸ್ತೆಗೆ ಹರಿಯುತ್ತಿತ್ತು. 10 ಕಂಪ್ಲೇಟ್ ಬಂದಿದೆ, ಈ ಪೈಕಿ 6 ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ವಾರ್‌ ರೂಂ ಅಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ನೀಡಿದರು.

RELATED ARTICLES

Related Articles

TRENDING ARTICLES