Monday, May 20, 2024

ಮಾಜಿ ಸಚಿವ ಬಿಜೆಪಿ ನಾಯಕ ಡಿ.ಬಿ.ಚಂದ್ರೇಗೌಡ ಇನ್ನಿಲ್ಲ

ಚಿಕ್ಕಮಗಳೂರು : ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಬಿಜೆಪಿ ನಾಯಕ    ಡಿ.ಬಿ.ಚಂದ್ರೇಗೌಡ (87) ನಿಧನರಾಗಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ನಿವಾಸದಲ್ಲಿ ಡಿ.ಬಿ.ಚಂದ್ರೇಗೌಡ ಕೊನೆಯುಸಿರೆಳೆದಿದ್ದಾರೆ.

ಮೂರು ಬಾರಿ ಶಾಸಕರಾಗಿ 3 ಬಾರಿ ಸಂಸದರರಾಗಿ ಆಯ್ಕೆಯಾಗಿದ್ದ ಚಂದ್ರೇಗೌಡ ರಾಜ್ಯಸಭಾ ಸದಸ್ಯರೂ ಆಗಿದ್ದರು. ಕೇಂದ್ರ ಸಚಿವರಾಗಿದ್ದ ಇವರು ಕಾಂಗ್ರೆಸ್​ನಿಂದ ಬಿಜೆಪಿ ಸೇರ್ಪಡೆಯಾಗಿ,ಬಿಜೆಪಿಯಿಂದಲೂ ಸಂಸದರಾಗಿ ಆಯ್ಕೆಯಾಗಿದ್ದರು.

ಇನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಅಂತಿಮ ಇಂದು ಮಧ್ಯಾಹ್ನ 2 ರಿಂದ ಸಂಜೆ 6ರವರೆಗೆ ಸಾರ್ವಜನಿಕರ ಅಂತಿಮ  ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ(ನವೆಂಬರ್ 08) ನಾಳೆ ಮಧ್ಯಾಹ್ನ ದಾರದಹಳ್ಳ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

RELATED ARTICLES

Related Articles

TRENDING ARTICLES