ನವದೆಹಲಿ: ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಸುಪ್ರೀಂಕೋರ್ಟ್ ಮುಂದೂಡಿದೆ.
ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿರುವ ತಡೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಸಿಬಿಐ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.
ಸಿಬಿಐ ತನಿಖೆಗೆ ಸರಕಾರ ಶಿಫಾರಸು ಮಾಡಿದ್ದನ್ನು ಡಿಕೆ ಶಿವಕುಮಾರ್ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಕರ್ನಾಟಕದ ಹೈಕೋರ್ಟ್ ವಿಭಾಗೀಯ ಪೀಠ ಸಿಬಿಐ ತನಿಖೆಗ ತಡೆ ನೀಡಿತ್ತು. ಹೈಕೋರ್ಟ್ ತಡೆಯಾಜ್ಞೆ ಆದೇಶ ಪ್ರಶ್ನಿಸಿ ಸಿಬಿಐ, ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್, ನವೆಂಬರ್ 10ಕ್ಕೆ ಮುಂದೂಡಿದ್ದಾರೆ.
ಇದನ್ನೂ ಓದಿ: ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಸಿಬಿಐ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್