Wednesday, January 22, 2025

ಹಿಂಗಾರು ಮಳೆ ಅಬ್ಬರ: ಧಾರಾಕಾರ ಮಳೆಗೆ ತತ್ತರಿಸಿದ ರಾಜಧಾನಿ ಜನ

ಬೆಂಗಳೂರು: ರಾಜ್ಯದಲ್ಲಿ ಮರುಣನ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧೆಡೆ ಇಂದು ಭಾರೀ ಮಳೆಯಾಗಿದೆ.

ಇನ್ನೂ ಎರಡು ದಿನಗಳ ಕಾಲ ಮೋಡ ಕಾವಿದ ವಾತವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುಸ್ಸೂಚನೆ ನೀಡಿದೆ.

ಬೆಂಗಳೂರು ನಗರದ ಮೆಜೆಸ್ಟಿಕ್, ಶಾಂತಿನಗರ, ವಿಜಯನಗರ, ಜಯನಗರ, ರಾಜಾಜಿನಗರ, ಚಂದ್ರಾಲೇಔಟ್, ಹೆಬ್ಬಾಳ, ಸದಾಶಿವನಗರ, ಬನಶಂಕರಿ, ಜೆ.ಪಿ.ನಗರ, ಕೋರಮಂಗಲ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.

ಕೆಲಸಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರರು ಮಳೆಯಿಂದಾಗಿ ಪರದಾಟ ನಡೆಸಿದರು.ನಿನ್ನೇಯಾದ ಮಳೆಯಿಂದ ಬೆಂಗಳೂರಿನ ತಗ್ಗುಪ್ರದೇಶಗಳು ಜಲಾವೃತಗೊಂಡಿದೆ.ನಗರದ ಹಲವು ಅಂಡರ್ ಪಾಸ್​ಗಳಲ್ಲಿ ನೀರು ತುಂಬಿಕೊಂಡಿತು

ಬೆಂಗಳೂರಿನಲ್ಲಿ ಜಿಟಿ ಜಿಟಿ ಮಳೆ 

ಬೆಂಗಳೂರಿನಲ್ಲಿ ಮುಂಜಾನೆನಿಂದಲೇ ಮಳೆ ಆರಂಭವಾಗಿದೆ.     

ಹಿಂಗಾರು ಬೆಳೆಗಳಿಗೆ ಜೀವ ಸೆಲೆಯಂತಾದ ಮಳೆ

ಹಿಂಗಾರು ಮಳೆ ಆಗದೆ ಬಾಗಲಕೋಟೆ ರೈತರು ಕಂಗಾಲಾಗಿದ್ದರು. ಆದರೆ ಇಂದು ಮಳೆಯಾಗಿದ್ದರಿಂದ ಅನ್ನದಾತರ ಮುಖದಲ್ಲಿ ಸಂತಸ ಮೂಡಿದೆ. ಅರ್ಧ ಗಂಟೆಗೂ ಅಧಿಕ ಕಾಲ ಜಿಟಿ ಜಿಟಿ ಮಳೆ ಸುರಿದಿದೆ. ಹಿಂಗಾರು ಬೆಳೆಗಳಿಗೆ ಈ ಮಳೆ ಜೀವ ಸೆಲೆಯಂತಾಗಿದೆ.

 

RELATED ARTICLES

Related Articles

TRENDING ARTICLES