ಬೆಂಗಳೂರು: ಆಸೀಸ್ ಆಲ್ರೌಂಡರ್ ಗ್ಲೆನ್ (Glenn Maxwell) ಮ್ಯಾಕ್ಸ್‌ವೆಲ್ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ (Australia vs Afghanistan) ಸಿಡಿಲಬ್ಬರದ ದ್ವಿಶತಕ ಸಿಡಿಸಿ ಏಕಾಂಗಿಯಾಗಿ ತಂಡವನ್ನು ಗೆಲುವಿನ ದಡ ಸೇರಿಸಿದ್ದಾರೆ.
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಸುನಾಮಿ ಎಬ್ಬಿಸಿ ಕಪಿಲ್ ದೇವ್ ದಾಖಲೆಯನ್ನು ಉಡೀಸ್ ಮಾಡಿದ್ದಾರೆ.
ಕಪಿಲ್ ದೇವ್ ದಾಖಲೆ ಉಡೀಸ್
ಪಂದ್ಯದಲ್ಲಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದ ಗ್ಲೆನ್ ಮ್ಯಾಕ್ಸ್‌ವೆಲ್, ವಿಶ್ವಕಪ್ ಆವೃತ್ತಿಯಲ್ಲಿ ನಂ. 5 ಅಥವಾ ಅದಕ್ಕಿಂತ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಇಳಿದು ದ್ವಿಶತಕ ಸಿಡಿಸಿದ ಮೊದಲ ಆಟಗಾರ ಎನಿಸಿಕೊಂಡರು. ಈ ಮೂಲಕ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಕಪಿಲ್ ದೇವ್ ಹೊಂದಿದ್ದ ಹಿಂದಿನ ದಾಖಲೆಯನ್ನು ಮ್ಯಾಕ್ಸ್‌ವೆಲ್ ಮುರಿದರು.
ಮ್ಯಾಕ್ಸ್‌ವೆಲ್ ಬರೆದ ದಾಖಲೆಗಳು
* ಏಕದಿನದಲ್ಲಿ ದ್ವಿಶತಕ ಸಿಡಿಸಿದ ಆಸ್ಟ್ರೇಲಿಯಾದ ಮೊದಲ ಆಟಗಾರ
* ಏಕದಿನದ ಚೇಸ್‌ನಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ದಾಖಲು
* 200ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ನಾನ್ ಓಪನರ್
* 5 ಅಥವಾ ನಂತರದ ಸ್ಥಾನದಲ್ಲಿ ಹೆಚ್ಚು ಶತಕಗಳು
1983 ರ ವಿಶ್ವಕಪ್ನಲ್ಲಿ 6ನೆ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 175 ರನ್ ಸಿಡಿಸಿದ್ದ ಕಪಿಲ್ ದೇವ್ ಅವರ ದಾಖಲೆಯನ್ನೂ ಮುರಿದಿದ್ದಾರೆ