Friday, November 22, 2024

ಒಂಟಿ ಕಾಲಲ್ಲಿ ತಂಡ ಗೆಲ್ಲಿಸಿದ ಮ್ಯಾಕ್ಸ್‌ವೆಲ್ : ಅಬ್ಬರದ ದ್ವಿಶತಕಕ್ಕೆ ಹಳೆಯ ದಾಖಲೆಗಳೆಲ್ಲ ಉಡೀಸ್..!

ಬೆಂಗಳೂರು: ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ 2023 ರ ಏಕದಿನ ವಿಶ್ವಕಪ್‌ನಲ್ಲಿ ಅಫ್ಘಾನಿಸ್ತಾನ ವಿರುದ್ಧ 128 ಎಸೆತಗಳಲ್ಲಿ ಅಜೇಯ 201 ರನ್ ಸಿಡಿಸಿ ದ್ವಿಶತಕಕ್ಕೆ ಹಳೆಯ ದಾಖಲೆಗಳೆಲ್ಲ ಉಡೀಸ್ ಮಾಡಿದ್ದಾರೆ.

ಇವರು ಈ ಇನ್ನಿಂಗ್ಸ್‌ನಲ್ಲಿ ಗ್ಲೆನ್ 21 ಬೌಂಡರಿ ಮತ್ತು 10 ಸಿಕ್ಸರ್‌ಗಳನ್ನು ಬಾರಿಸಿದ ಮ್ಯಾಕ್ಸ್​ವೆಲ್ ಈ ದ್ವಿಶತಕದೊಂದಿಗೆ ಗ್ಲೆನ್ ಪ್ರಮುಖ ದಾಖಲೆಗಳನ್ನು ನಿರ್ಮಿಸಿದರು.

ಕ್ರಿಕೆಟ್ ಇತಿಹಾಸದಲ್ಲಿ ಮ್ಯಾಕ್ಸ್‌ವೆಲ್ ಹೊಸ ದಾಖಲೆ

ಆಸೀಸ್ ಬ್ಯಾಟ್ಸ್‌ಮನ್ ಮ್ಯಾಕ್ಸ್‌ವೆಲ್ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಏಕದಿನದಲ್ಲಿ 200 ರನ್ ಗಳಿಸಿದ ಆಸೀಸ್ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅವರು ವಿಶ್ವಕಪ್ ನಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ಚೇಸರ್ & ಟೂರ್ನಿಯಲ್ಲಿ ಮೊದಲ ದ್ವಿಶತಕ ಸಿಡಿಸಿದ ಆಟಗಾರ ಎನಿಸಿದರು. ಬಲ ತೊಡೆಯ ಸ್ನಾಯು ಸೆಳೆತದ ನಡುವೆಯೂ ಆಸೀಸ್ ಆಟಗಾರ ಕ್ರೀಸ್ ನಲ್ಲಿ ನಿಂತು ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಮ್ಯಾಕ್ಸ್‌ವೆಲ್ ಬರೆದ ದಾಖಲೆಗಳು 

* ಏಕದಿನದಲ್ಲಿ ದ್ವಿಶತಕ ಸಿಡಿಸಿದ ಆಸ್ಟ್ರೇಲಿಯಾದ ಮೊದಲ ಆಟಗಾರ

* ಏಕದಿನದ ಚೇಸ್‌ನಲ್ಲಿ ಅತಿ ಹೆಚ್ಚು ವೈಯಕ್ತಿಕ ರನ್ ದಾಖಲು

* 200ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ನಾನ್ ಓಪನರ್

* 5 ಅಥವಾ ನಂತರದ ಸ್ಥಾನದಲ್ಲಿ ಹೆಚ್ಚು ಶತಕಗಳು

1983 ರ ವಿಶ್ವಕಪ್​ನಲ್ಲಿ 6ನೆ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 175 ರನ್ ಸಿಡಿಸಿದ್ದ ಕಪಿಲ್ ದೇವ್ ಅವರ ದಾಖಲೆಯನ್ನೂ ಮುರಿದಿದ್ದಾರೆ

 

RELATED ARTICLES

Related Articles

TRENDING ARTICLES