Sunday, December 22, 2024

ನವೆಂಬರ್ 15ಕ್ಕೆ ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ : ಡಿ.ಕೆ. ಶಿವಕುಮಾರ್

ಬೆಂಗಳೂರು: ದೀಪಾವಳಿ ಮುಗಿದ ನಂತರ ನವೆಂಬರ್ 15ಕ್ಕೆ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ದೆಹಲಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಡಿ ಕೆ ಶಿವಕುಮಾರ್ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿಕೆ  ನೀಡಿದ್ದಾರೆ.

ಬಿಜೆಪಿಯ ಈಗಿನ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ  ನಮ್ಮ ಒಬ್ಬ ಶಾಸಕರನ್ನೂ ಅವರ ಪಕ್ಷಕ್ಕೆ ಕರೆದುಕೊಳ್ಳಲು ಆಗಲ್ಲ.

ಇದನ್ನೂ ಓದಿ: ಕೋಟ್ಯಧೀಶನಾದ ಮಾದಪ್ಪ : 28 ದಿನಕ್ಕೆ 2ಕೋಟಿಗೂ ಹೆಚ್ಚು ಹಣ ಸಂಗ್ರಹ

ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ‌ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದು ಡಿ ಕೆ ಶಿವಕುಮಾರ್ ಎಮ

 

RELATED ARTICLES

Related Articles

TRENDING ARTICLES