Sunday, December 22, 2024

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ವರ್ಗ

ಬೆಂಗಳೂರು: ಏಳನೇ ವೇತನ ಆಯೋಗ ಪರಿಷ್ಕರಣೆ ಅವಧಿಯನ್ನು ರಾಜ್ಯ ಸರ್ಕಾರ ವಿಸ್ತರಿಸಿದ  ಬೆನ್ನಲ್ಲೇ  ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ವರ್ಗಾವಣೆ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯಿಂದ ಕೋಲಾರ ಜಿಲ್ಲೆಗೆ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಷಡಕ್ಷರಿ ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚು ಕೆಲಸ ಇಲ್ಲದೇ ಇರುವುದರಿಂದ ಶಿವಮೊಗ್ಗದ ಬದಲು ಬೆಂಗಳೂರಿನಲ್ಲಿಯೇ ಸಮಯ ಕಳೆಯುತ್ತಿದ್ದರು ಎಂದು ಹೇಳಲಾಗಿತ್ತು.

ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ. ಅಷ್ಟೇ ಅಲ್ಲ, ಹೆಚ್ಚಿನ ಕೆಲಸದ ಒತ್ತಡವಿರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಿಸಿದೆ.

 

RELATED ARTICLES

Related Articles

TRENDING ARTICLES