Saturday, January 18, 2025

ಅನೈತಿಕ ಸಂಬಂಧ: ನಡುರಸ್ತೆಯಲ್ಲಿ ಮಹಿಳೆಗೆ ಥಳಿತ!

ಹುಬ್ಬಳ್ಳಿ: ನಗರದಲ್ಲಿ ಓರ್ವ ಮಹಿಳೆಯನ್ನು ನಡುರಸ್ತೆಯಲ್ಲಿ ಅಟ್ಟಾಡಿಸಿ ಚಪ್ಪಲಿಯಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ.

ಹಲ್ಲೆಗೆ ಅನೈತಿಕ ಸಂಬಂಧವೇ ಕಾರಣ ಎಂದು ತಿಳಿದುಬಂದಿದೆ. ಮಹಿಳೆ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಪುರುಷನ ಕುಟುಂಬಸ್ಥರು ಮಹಿಳೆ ಮೇಲೆ ಅಟ್ಯಾಕ್​ ಮಾಡಿದ್ದಾರೆ. ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಹೆಂಡತಿ ಹಾಗೂ ಮಕ್ಕಳಿಂದ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.

ಇದನ್ನೂ ಓದಿ: ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಜಾಮೀನು!

ಈಕೆ ಅನೈತಿಕ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಳೆಂದು ಆರೋಪಿಸಿ ವ್ಯಕ್ತಿಯ ಕುಟುಂಬಸ್ಥರು ಸೇರಿ ಮಹಿಳೆಗೆ ಥಳಿಸಿದ್ದಾರೆ. ಹಲ್ಲೆಗೊಳಗಾ ಮಹಿಳೆ ಸುಮಾರು 10 ವರ್ಷಗಳಿಂದ ಕಿಮ್ಸ್​ನಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಕೆಲಸ ಮುಗಿಸಿ ಮನೆಗೆ ಹೊರಡುವ ವೇಳೆ ವ್ಯಕ್ತಿ ಕುಟುಂಬಸ್ಥರು ಏಕಾಏಕಿ ಹಲ್ಲೆ ನಡೆಸಿದ್ದಾರೆ. ಹಳ್ಳೆಗೊಳಗಾದ ತಂಗಿಯನ್ನು ಬಿಡಿಸಲು ಬಂದ ಅಕ್ಕನ ಮೇಲೂ ಹಲ್ಲೆ ನಡೆಸಲಾಗಿದೆ.

ಇನ್ನು ಘಟನೆ ಸಂಬಂಧ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿದ್ದು, ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES