ಬೆಂಗಳೂರು: ಚೈತ್ರ ಅಂಡ್ ಗ್ಯಂಗ್ ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಾಲಾಶ್ರೀಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಚೈತ್ರ ಅಂಡ್ ಗ್ಯಾಂಗ್ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು 800 ಪುಟಗಳ ಆರೋಪ ಪಟ್ಟಿ ವರದಿಯನ್ನು ನ್ಯಾಯಲಯಕ್ಕೆ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಏಕದಿನ ರ್ಯಾಂಕಿಂಗ್ನಲ್ಲಿ ಭಾರತೀಯರದ್ದೇ ದರ್ಬಾರ್!
ಹಾಲಾಶ್ರೀಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಅಕ್ಟೋಬರ್ 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.