Monday, May 6, 2024

ವಂಚನೆ ಕೇಸ್​; ಅಭಿನವ ಹಾಲಶ್ರೀಗೆ ಜಾಮೀನು!

ಬೆಂಗಳೂರು: ಚೈತ್ರ ಅಂಡ್ ಗ್ಯಂಗ್ ವಂಚನೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಹಾಲಾಶ್ರೀಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದಬಾಬು ಪೂಜಾರಿಗೆ ಚೈತ್ರ ಅಂಡ್​ ಗ್ಯಾಂಗ್​ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಅಧಿಕಾರಿಗಳು 800 ಪುಟಗಳ ಆರೋಪ ಪಟ್ಟಿ ವರದಿಯನ್ನು ನ್ಯಾಯಲಯಕ್ಕೆ ಸಲ್ಲಿಸಿದ್ದಾರೆ.

ಇದನ್ನೂ ಓದಿ:  ಏಕದಿನ ರ‍್ಯಾಂಕಿಂಗ್​ನಲ್ಲಿ ಭಾರತೀಯರದ್ದೇ ದರ್ಬಾರ್!

ಹಾಲಾಶ್ರೀಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.

ಅಕ್ಟೋಬರ್​ 16 ರಂದು ಚೈತ್ರಾ ಮತ್ತು ತಂಡದಿಂದ ಉದ್ಯಮಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣದ ಮೂರನೇ ಆರೋಪಿಯಾದ ಅಭಿನವ ಹಾಲಶ್ರೀ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿತ್ತು.

RELATED ARTICLES

Related Articles

TRENDING ARTICLES