ತಮಿಳುನಾಡಿನಲ್ಲಿ ಈಶಾನ್ಯ ಮಾನ್ಸೂನ್ ತೀವ್ರಗೊಂಡಿದ್ದು ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ರಾಜ್ಯದ ಕೊಯಮತ್ತೂರು, ತಿರುಪ್ಪೂರ್, ಮಧುರೈ, ಥೇಣಿ, ದಿಂಡಿಗಲ್ ಸೇರಿದಂತೆ 5 ಜಿಲ್ಲೆಗಳಲ್ಲಿ ಹಾಗೂ ನೀಲಗಿರಿಯ ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಇಂದು ಕೇರಳ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಭಾರತದ ದಕ್ಷಿಣ ಭಾಗದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ: ಮಾಜಿ ಸಚಿವ ಸುಧಾಕರ್ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಪ್ ಪಕ್ಷ ದೂರು!
ಕಳೆದ ಕೆಲವು ದಿನಗಳಿಂದ ಕೇರಳದಲ್ಲಿ ಭಾರೀ ಮಳೆಯಾಗಿದ್ದು, ಕೇರಳದಲ್ಲಿ ಮುಂದಿನ 2 ದಿನಗಳವರೆಗೆ ವ್ಯಾಪಕ ಮಳೆಯಾಗಲಿದೆ. ತಮಿಳುನಾಡಿನಲ್ಲೂ ಮುಂದಿನ 2 ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.