Friday, December 27, 2024

ಏಕದಿನ ರ‍್ಯಾಂಕಿಂಗ್​ನಲ್ಲಿ ಭಾರತೀಯರದ್ದೇ ದರ್ಬಾರ್!

ಮುಂಬೈ: ಐಸಿಸಿ ಏಕದಿನ ಕ್ರಿಕೆಟ್​ನ ನೂತನ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಹೊಸ ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಒಟ್ಟು 7 ಆಟಗಾರರು ಸ್ಥಾನ ಪಡೆದಿದ್ದಾರೆ.

ಏಕದಿನ ಕ್ರಿಕೆಟ್​ ಬ್ಯಾಟರ್​​ಗಳ ಶ್ರೇಯಾಂಕ ಪಟ್ಟಿಯಲ್ಲಿ ಇದೇ ಮೊದಲ ಬಾರಿಗೆ ಶುಭ್​ಮನ್ ಗಿಲ್ ಅಗ್ರಸ್ಥಾನ ಅಲಂಕರಿಸಿದ್ದಾರೆ. ಮತ್ತೊಂದೆಡೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ನಂಬರ್ 1 ಬೌಲರ್ ಆಗಿ ಹೊರಹೊಮ್ಮಿದ್ದಾರೆ.

ಈ ಬಾರಿಯ ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾ ಆಟಗಾರರು ಶ್ರೇಯಾಂಕದಲ್ಲೂ ಮೇಲೇರಿದ್ದು, ಅದರಂತೆ ಬ್ಯಾಟರ್​ಗಳ ಟಾಪ್-1- ಪಟ್ಟಿಯಲ್ಲಿ ಮೂವರು ಭಾರತೀಯ ಆಟಗಾರರು ಕಾಣಿಸಿಕೊಂಡಿದ್ದಾರೆ. ಇನ್ನು ಬೌಲರ್​ಗಳ ಶ್ರೇಯಾಂಕದಲ್ಲಿ ನಾಲ್ವರು ಆಟಗಾರರು ಅಗ್ರ ಹತ್ತರಲ್ಲಿ ಸ್ಥಾನ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES