Monday, December 23, 2024

ಟೀ ಕುಡಿಯಲು ಬಂದಾಗ ಅಟ್ಯಾಕ್ : ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊಲೆ ಪ್ರಕರಣಗಳು ದಿನೆದಿನ ಹೆಚ್ಚುತ್ತಲೇ ಇವೆ ಹೊರತು ಕಡಿಮೆ ಮಾತ್ರ ಆಗುತ್ತಿಲ್ಲ. ಪ್ರತೀಮಾ ಕೊಲೆಯ ಮಾಸುವ ಮುನ್ನವವೇ ಮತ್ತೋಂದು ಅಂತಹದೇ ಘಟನೆ ಸಂಭವಿಸಿ ಇಡೀ ಬೆಂಗಳೂರನ್ನೇ ಬೆಚ್ಚಿ ಬೀಳುವಂತೆ ಮಾಡಿದೆ.

ಯೆಸ್ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬುಧವಾರ ರಾತ್ರಿ 9:30ರ ಸುಮಾರಿಗೆ ಪುಟ್ಟೇನಹಳ್ಳಿ ಠಾಣಾ ವ್ಯಾಪ್ತಿಯ ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.

ಸಹದೇವ್ ಕೊಲೆಯಾದ ರೌಡಿಶೀಟರ್. ಕೋಣನಕುಂಟೆ ಠಾಣಾ ವ್ಯಾಪ್ತಿಯ ರೌಡಿಶೀಟರ್ ಆಗಿದ್ದು, ಕೀ ಕುಡಿಯಲು ಬೇಕರಿ ಬಳಿ ಬಂದಿದ್ದಾಗ ಮೂರು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ದುಷ್ಕರ್ಮಿಗಳ ಗುಂಪು, ಸಹದೇವ್ ಮೇಲೆ ಹಲ್ಲೆ ಮಾಡಿ ಹತ್ಯೆಗೈದು ಪರಾರಿಯಾಗಿದೆ.

ಇದನ್ನೂ ಓದಿ: 

ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪ್ರಕರಣ ದಾಖಲಿಸಿಕೊಡಿದ್ದಾರೆ.  ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ

 

 

RELATED ARTICLES

Related Articles

TRENDING ARTICLES