ಬೆಂಗಳೂರು: ಚುನಾವಣಾ ರಾಜಕೀಯಕ್ಕೆ ವಿದಾಯ ಘೋಷಿಸಿದ ಮಾಜಿ ಸಿಎಂ, ಸಂಸದ ಡಿ.ವಿ.ಸದಾನಂದ ಗೌಡ ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ ಎಂದು ಮಾಜಿ ಸಿಎಂ B.S.ಯಡಿಯೂರಪ್ಪ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಟಿಕೆಟ್ ಸಿಗಲಾರದೆನ್ನುವ ಕಾರಣಕ್ಕೆ ಚುನಾವಣಾ ರಾಜಕೀಯದಿಂದ ದೂರ ಸರಿಯವ ನಿರ್ಧಾರ ಮಾಡಿದ್ದಾರಾ..? ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂತ ನೇರವಾಗಿ ವರಿಷ್ಠರು ಅವರಿಗೆ ಹೇಳಿದ್ದಾರೆ. ಆದರೆ ಪಕ್ಷದ ಬೇರೆಲ್ಲ ಚಟುವಟಿಕೆಗಳಲ್ಲಿ ಅವರು ತಮ್ಮನ್ನು ತೊಡಗಿಸಿಕೊಳ್ಳಲಿದ್ದಾರೆ ಎಂದರು.
ಬಿಜೆಪಿ ನನಗೆ ಎಲ್ಲವನ್ನು ಕೊಟ್ಟಿದೆ
ಹಾಸನ ಜಿಲ್ಲೆಯಲ್ಲಿ ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ನಂತರ ನಗರದ ಖಾಸಗಿ ಹೋಟೆಲ್‌ನಲ್ಲಿ ಮಾತನಾಡಿದ್ದ ಡಿ.ವಿ ಸದಾನಂದಗೌಡ ಅವರು, ನಾನು ಚುನಾವಣಾ ರಾಜಕೀಯದಿಂದ ದೂರ ಉಳಿಯಲು ನಿರ್ಧಾರ ಮಾಡಿದ್ದೇನೆ.
ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸೋಲಿಗೆ ನಮ್ಮ ಕೆಲವು ನಿರ್ಧಾರಗಳು ಕಾರಣವಾಗಿವೆ. ನನಗೆ ಪಕ್ಷ ಎಲ್ಲವನ್ನು ಕೊಟ್ಟಿದೆ. ಯಡಿಯೂರಪ್ಪ ಬಿಟ್ಟರೆ ಪಕ್ಷದಲ್ಲಿ ನಾನೇ ಗರಿಷ್ಠ ಲಾಭವನ್ನು ಪಡೆದವನು. ನಾನು ಮತ್ತೆ ಅಧ್ಯಕ್ಷನಾಗುವ ಆಸೆಯಿಲ್ಲ. ಈ ಹಿಂದೆ ಸಿಎಂ ಆಗಿದ್ದೆ, ಕೇಂದ್ರ ಸಚಿವನಾಗಿದ್ದೆ, ಪಕ್ಷದ ಅಧ್ಯಕ್ಷ ಆಗಿದ್ದೆ. ಇನ್ನೇನು ಬೇಕಿಲ್ಲ ನನಗೆ. ಸ್ವಂತ ಶಕ್ತಿಯಿಂದ ಬಿಜೆಪಿ ಕಟ್ಟುತ್ತೇವೆ ಎಂದರು.