Wednesday, January 22, 2025

ಕೆಇಎ ನೇಮಕಾತಿ ಅಕ್ರಮ: ಕಿಂಗ್​ಪಿನ್ ಆರ್‌.ಡಿ.ಪಾಟೀಲ್ ಬಂಧನಕ್ಕೆ ವಿಶೇಷ ತಂಡ ರಚನೆ

ಬೆಂಗಳೂರು:  KEA ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಿಂಗ್‌ಪಿನ್ ಆರ್‌.ಡಿ.ಪಾಟೀಲ್ ಬಂಧನಕ್ಕೆ ವಿಶೇಷ ತಂಡ ರಚಿಸಲಾಗಿದೆ.

ನಾಲ್ವರು ಪೊಲೀಸ್ ಅಧಿಕಾರಿಗಳ ನೇತೃತ್ವದ ತಂಡ ರಚಿಸಿ ಕಲಬುರಗಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಎಸಿಪಿಗಳಾದ ಭೂತೇಗೌಡ ಮತ್ತು ಡಿಜಿ ರಾಜಣ್ಣ, ಸಿಪಿಐಗಳಾದ ಅರುಣಕುಮಾರ್​​ ಮತ್ತು ಮಲ್ಲಿಕಾರ್ಜುನ ಇಕ್ಕಳಕಿ‌ ನೇತೃತ್ವದಲ್ಲಿ ಶೋಧ ಕಾರ್ಯ ನಡೆಯುತ್ತಿದೆ.

ಕಲಬುರಗಿ ನಗರದ ಶ್ರೀ ಶರಣಬಸವೇಶ್ವರ ಪರೀಕ್ಷಾ ಕೇಂದ್ರದಲ್ಲಿ ನಡೆದಿದ್ದ KEA ಪರೀಕ್ಷೆಯಲ್ಲಿ ಅಭ್ಯರ್ಥಿಗೆ ಬ್ಲೂಟೂತ್ ಡಿವೈಸ್ ನೀಡಿದ ಹಿನ್ನಲೆಯಲ್ಲಿ ಆರ್‌ಡಿ ಪಾಟೀಲ್ ವಿರುದ್ಧ ಅಶೋಕ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.

RELATED ARTICLES

Related Articles

TRENDING ARTICLES