Wednesday, January 22, 2025

ರಣದೀಪ್ ಸುರ್ಜೇವಾಲಗೆ ಸುಪ್ರೀಂಕೋರ್ಟ್ ರಿಲೀಫ್ : ಏನಿದು ಪ್ರಕರಣ?

ಬೆಂಗಳೂರು : ಕಾಂಗ್ರೆಸ್ ನಾಯಕ, ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರಿಗೆ ಸುಪ್ರೀಂಕೋರ್ಟ್ ಗುರುವಾರ ರಿಲೀಫ್ ನೀಡಿದೆ.

ರಣದೀಪ್ ಸುರ್ಜೇವಾಲ ಅವರನ್ನು ಬಂಧಿಸದಂತೆ 5 ವಾರಗಳ ತಡೆ ನೀಡಿದೆ. ತಮ್ಮ ವಿರುದ್ಧದ ವಾರೆಂಟ್ ಪ್ರಶ್ನಿಸಿ ವಾರಣಾಸಿ ನ್ಯಾಯಾಲಯಕ್ಕೆ ಮೇಲ್ಮನವಿ ಅರ್ಜಿ ಸಲ್ಲಿಸಲು ನಾಲ್ಕು ವಾರಗಳ ಸಮಯ ನೀಡಿದೆ. ತಮ್ಮ ವಿರುದ್ಧ ಹೊರಡಿಸಿದ್ದ ವಾರೆಂಟ್ ಪ್ರಶ್ನಿಸಿ ರಣದೀಪ್ ಸುರ್ಜೆವಾಲ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ರಣದೀಪ್ ಸುರ್ಜೇವಾಲ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಬೆಳಗ್ಗೆ ವಿಷಯ ಪ್ರಸ್ತಾಪಿಸಿ ಕೂಡಲೇ ವಿಚಾರಣೆ ನಡೆಸುವಂತೆ ಒತ್ತಾಯಿಸಿದರು. ಇದಾದ ಬಳಿಕ ಪ್ರಕರಣದ ವಿಚಾರಣೆ ನಡೆಯಿತು. ಪ್ರಕರಣವು 2000ದಲ್ಲಿ ನಡೆದಿದೆ.

ಸಂವಾಸಿನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರು ಸುಳ್ಳು ಆರೋಪದ ವಿರುದ್ಧ ಪ್ರತಿಭಟಿಸುತ್ತಿರುವಾಗ ವಾರಣಾಸಿಯ ವಿಭಾಗೀಯ ಆಯುಕ್ತರ ನ್ಯಾಯಾಲಯ ಮತ್ತು ಕಚೇರಿ ಆವರಣದಲ್ಲಿ ಹಿಂಸಾತ್ಮಕ ಘಟನೆ ನಡೆಯಿತು. ಗದ್ದಲವನ್ನು ಸೃಷ್ಟಿಸಿದ ಆರೋಪದ ಮೇಲೆ ಭಾರತೀಯ ಯೂತ್ ಕಾಂಗ್ರೆಸ್‌ನ ಅಂದಿನ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಸುರ್ಜೇವಾಲಾ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಾದಿಸಿದರು.

RELATED ARTICLES

Related Articles

TRENDING ARTICLES