ಬೆಂಗಳೂರು: ಬಿಜೆಪಿ-ಜೆಡಿಎಸ್ ನಾಯಕರು ಅನುಕಂಪದಿಂದ ರಾಜ್ಯದಲ್ಲಿ ಬರ ಅಧ್ಯಾಯನ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಲೇವಡಿ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿ, ಈಗಾಗಲೇ ನಮ್ಮ ಸರ್ಕಾರ ಬರಅಧ್ಯಾಯನ ಮಾಡಿ ಕೇಂದ್ರಕ್ಕೆ ವರದಿಯನ್ನೂ ಸಲ್ಲಿಸಿದೆ. ತಮ್ಮ ಪ್ರಚಾರಕ್ಕಾಗಿ ಎರಡು ಗಿಡ ನೋಡಿ ಬಂದರೆ ಅದು ಬರ ಅಧ್ಯಾನವಲ್ಲ ಎಂದು ವಿಪಕ್ಷಗಳ ವಿರುದ್ಧ ಡಿಕೆಶಿ ಗುಡುಗಿದ್ದಾರೆ.
ಈಗ ಅವರು ಪ್ರಧಾನಿ ಬಳಿ ಹೋಗಿ ಮಾತನಾಡಲ. ಬರ ಪರಿಹಾರವನ್ನಾದರೂ ಕೊಡಿಸಲಿ ಎಂದು ಹೇಳಿದ್ದಾರೆ.
BJP-JDSಗೆ ಅನುಕಂಪ ಬಂದಿದೆ
BJP ಹಾಗೂ JDSನ ಬರ ಅಧ್ಯಯನ ಪ್ರವಾಸದ ಕುರಿತು ಡಿಕೆಶಿ ವ್ಯಂಗ್ಯವಾಡಿದ್ದಾರೆ. ಎರಡು ಪಕ್ಷಗಳಿಗೆ ಜನರ ಮೇಲೆ ಸಾಕಷ್ಟು ಅನುಕಂಪ ಬಂದಿದ್ದು, ಬರ ಅಧ್ಯಯನಕ್ಕೆ ಮುಂದಾಗಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ಅಧ್ಯಯನ ನಡೆಸಿ, ಕೇಂದ್ರ ಸರ್ಕಾರಕ್ಕೆ ವರದಿ ನೀಡಿದೆ. ಇದೀಗ, ಬಿಜೆಪಿ-ಜೆಡಿಎಸ್ ನಾಯಕರು ಪ್ರಧಾನಿ ಮೋದಿ ಭೇಟಿ ಮಾಡಿ ಅನುದಾನ ಕೊಡಿಸುವ ಕೆಲಸ ಮಾಡಲಿ ಎಂದು ಲೇವಡಿ ಮಾಡಿದ್ದಾರೆ. ಕೇಂದ್ರದ ಬಳಿ ನಾವು ಭಿಕ್ಷೆ ಕೇಳುತ್ತಿಲ್ಲ. ಕೊಡಬೇಕಾದ ಅನುದಾನ ಕೊಡಲಿ ಅಷ್ಟೇ ಎಂದು ಡಿಕೆಶಿ ಹೇಳಿದ್ದಾರೆ.