ಮಂಡ್ಯ: ಶ್ರೀರಂಗಪಟ್ಟಣದಲ್ಲಿ ಟಿಪ್ಪು ಜಯಂತಿ (Tipu Jayanti) ಆಚರಣೆಗೆ ಚಿಂತನೆ ಹಿನ್ನೆಲೆಯಲ್ಲಿ ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ಅವರು ಇಂದು ನಿಷೇಧಾಜ್ಞೆ ಜಾರಿ ಮಾಡಿ ಎಂದು ಆದೇಶಿಸಿದ್ದಾರೆ.
ಟಿಪ್ಪು ವಕ್ಫ್ ಎಸ್ಟೇಟ್, ಟಿಪ್ಪು ಜಯಂತಿ ಆಚರಿಸಲು ಮುಂದಾಗಿದ್ದು, ಮೈಸೂರು ಸೇರಿದಂತೆ ಹಲವೆಡೆಯಿಂದ ಜನ ಆಗಮಿಸುವ ಸಾಧ್ಯತೆ ಇದೆ.
ಇದನ್ನೂ ಓದಿ: 200 ರೂಪಾಯಿ ಆಸೆ ತೋರಿಸಿ 2 ಲಕ್ಷ ರೂ. ಲಪಟಾಯಿಸಿದ ಖದೀಮರು
ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಗ್ಗೆ 6 ರಿಂದಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ರಾತ್ರಿ 11 ಗಂಟೆವರೆಗೆ ಇರಲಿದೆ.
ಯಾವುದೇ ಮೆರವಣಿಗೆ, ಪ್ರತಿಭಟನೆ ನಡೆಸದಂತೆ ನಿರ್ಬಂಧ ವಿಧಿಸಲಾಗಿದೆ. ಜೊತೆಗೆ, ಯಾವುದೇ ಘೋಷಣೆ ಕೂಗದಂತೆ, ಪ್ರಚೋದನಕಾರಿ ಚಿತ್ರವಿರುವ ಟೀ ಶರ್ಟ್ ಧರಿಸದಂತೆ, ಬ್ಯಾನರ್, ಬಂಟಿಂಗ್ಸ್, ಧ್ವನಿವರ್ಧಕ, ಪಟಾಕಿ ಸಿಡಿಸದಂತೆ ಆದೇಶದಲ್ಲಿ ತಿಳಿಸಲಾಗಿದೆ.
ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಬಾರಿ ಸರ್ಕಾರ ಅಧಿಕಾರಕ್ಕೆ ಬಂದಾಗ ಟೀಕೆ, ವಿರೋಧಗಳ ನಡುವೆ ಟಿಪ್ಪು ಜಯಂತಿ ಆಚರಣೆಯನ್ನು ಜಾರಿಗೆ ತರಲಾಗಿತ್ತು. ಇದನ್ನು ಬಿಜೆಪಿ ತನ್ನ ಅಧಿಕಾರಾವಧಿಯಲ್ಲಿ (2019 ರಲ್ಲಿ) ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ 2019ರಲ್ಲಿ ಟಿಪ್ಪು ಜಯಂತಿ ಆಚರಣೆ ರದ್ದತಿ ಆದೇಶವನ್ನು ಹಿಂಪಡೆದಿಲ್ಲ. ಹೀಗಾಗಿ ಸರ್ಕಾರದಿಂದ ಟಿಪ್ಪು ಜಯಂತಿ ಆಚರಣೆ ನಡೆಯುವುದಿಲ್ಲ. ಆದರೆ, ಕೆಲವು ಮುಸ್ಲಿಂ ಸಂಘಟನೆಗಳು ಆಚರಣೆಗೆ ಮುಂದಾಗಿವೆ.