Sunday, November 17, 2024

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿಎಸ್​ವೈ ಪುತ್ರ ಬಿ.ವೈ ವಿಜಯೇಂದ್ರ ಆಯ್ಕೆ

ಬೆಂಗಳೂರು : ಬಿಜೆಪಿ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಜಿ ಸಿಎಂ ಡಾ.ಬಿ.ಎಸ್​ ಯಡಿಯೂರಪ್ಪ ಅವರ ಪುತ್ರ, ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ.

ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶ ಹೊರಡಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ.

ರೇಸ್​ನಲ್ಲಿ ಇದ್ದವರು ಯಾರು?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಸಿ.ಟಿ. ರವಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬಂದಿತ್ತು. ಅಂತಿಮವಾಗಿ ಇದೀಗ ಬಿ.ವೈ. ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಒಲಿದಿದೆ. ಈ ಮೂಲಕ ಬಿಜೆಪಿ ಹೈಕಮಾಂಡ್ ಮತ್ತೆ ಬಿ.ಎಸ್ ಯಡಿಯೂರಪ್ಪರಿಗೆ ಮಣೆ ಹಾಕಿದೆ.

ಹೈಕಮಾಂಡ್​ನಿಂದ ದೀಪಾವಳಿ ಗಿಫ್ಟ್

ಬಿ.ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡುವ ಮೂಲಕ ಬಿಜೆಪಿ ಹೈಕಮಾಂಡ್ ದೀಪಾವಳಿ ಗಿಫ್ಟ್ ನೀಡಿದೆ. ಈ ಮೂಲಕ ಪುತ್ರನಿಗೆ ರಾಜ್ಯಾಧ್ಯಕ್ಷ ಪಟ್ಟ ಕೊಡಿಸುವಲ್ಲಿ ಬಿಎಸ್​ವೈ ಸಕ್ಸಸ್​ ಆಗಿದ್ದಾರೆ ಎನ್ನಬಹುದು. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯ ಕಡೆಗಣನೆ ಎಂಬ ವಿಪಕ್ಷಗಳ ಟೀಕೆಗೆ ಬಿಜೆಪಿ ಟಕ್ಕರ್ ಕೊಟ್ಟಿದೆ.

RELATED ARTICLES

Related Articles

TRENDING ARTICLES